ಚಿಕ್ಕಬಳ್ಳಾಪುರ: ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಅಂತಹುದೇ ಹೀನ ಕೃತ್ಯವೊಂದು ಜಿಲ್ಲೆಯಲ್ಲಿ ನಡೆದಿದೆ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ವೃದ್ಧೆ ಇದ್ದಾಗ, ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಆರೋಪಿಯನ್ನು ಚಿಂತಾಮಣಿಯ ಹೈದರಾಲಿ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಅಸ್ವಸ್ಥ ವೃದ್ಧೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಹೊಗಿದ್ದ ವೃದ್ಧೆ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.