ಉಡುಪಿ: ಕಾಪು ಪುರಸಭೆಯಲ್ಲಿ ಆಪರೇಷನ್ ಕಮಲ, ಬೆಳಗ್ಗೆ ಬಿಜೆಪಿಗೆ ಸೇರ್ಪಡೆ, ಮಧ್ಯಾಹ್ನ ಉಪಾಧ್ಯಕ್ಷೆಯಾದ SDPI ಸದಸ್ಯೆ..! ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಬಾರೀ ಸದ್ದು ಮಾಡುತ್ತಿದೆ. ತಮ್ಮ ಎದುರಾಳಿಗಳೆಂದೇ ಬಿಂಬಿತವಾಗಿರುವ ಎಸ್‌ಡಿಪಿಐ ನೊಂದಿಗೆ ಸೇರಿ ಬಿಜೆಪಿ ಸರ್ಕಾರ ರಚಿಸಿದೆ. ಎಸ್‌ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಪುರಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರು ಸಹ ಈ ಬಾರಿ ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳಾ ಅಭ್ಯರ್ಥಿಗೆ ಮೀಸಲಾತಿ ಘೋಷಣೆಯಾಗಿತ್ತು. ಬಿಜೆಪಿ ಬಳಿ ಈ ಕೆಟಗರಿಗೆ ಸೂಕ್ತ ಅಭ್ಯರ್ಥಿ ಇರಲಿಲ್ಲ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಬಳಿ ಎಸ್ಸಿ ಮಹಿಳಾ ಅಭ್ಯರ್ಥಿಗಳಿದ್ದರು. ಹೀಗಾಗಿ ಎಸ್ಡಿಪಿಐಗೆ ಭಾರತೀಯ ಜನತಾ ಪಾರ್ಟಿ ಆಪರೇಷನ್ ಕಮಲ ಮಾಡಿ ಯಶಸ್ವಿಯಾಗಿದೆ. ಎಸ್ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ.
ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮ್ಮುಖದಲ್ಲಿ ಬೆಳಿಗ್ಗೆ SDPI ಸದಸ್ಯೆ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆ
ಸದಸ್ಯ ಬಲ ಬಲದಲ್ಲಿ ಬಿಜೆಪಿಯಲ್ಲಿ 12 ಸದಸ್ಯರಿದ್ದರು ಸಹ ಪರಿಶಿಷ್ಟ ಜಾತಿಯ ಸದಸ್ಯರು ಇರಲಿಲ್ಲವೆಂದು ಕಂಗಾಲಾಗಿದ್ದರು ಆದರೆ ಚುನಾವಣೆ ನಡೆಯುವ ಕೆಲವೇ ಗಂಟೆಗಳ ಮೊದಲು SDPI ಸದಸ್ಯೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ ಆಸೆ ತಣ್ಣೀರೆರೆಚಿದ್ದಾರೆ. ಅಧ್ಯಕ್ಷೆಯಾಗಿ ಹರಿಣಾಕ್ಷಿ, ಉಪಾಧ್ಯಕ್ಷೆಯಾಗಿ ಸರಿತಾ ಶಿವಾನಂದ ಆಯ್ಕೆಯಾಗಿದ್ದಾರೆ.
ಆದರೇ ಬಿಜೆಪಿಯ ಈ ನಡೆ ಪಕ್ಷದ ಕಟ್ಟಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿದೆ. ಇನ್ನು ಕಾಂಗ್ರೆಸ್ ಬಿಜೆಪಿ ಹಾಗೂ ಎಸ್ ಡಿಪಿಐ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದೆ. ಅಲ್ಲದೇ ಸೋಶಿಯಲ್ ಮಿಡಿಯಾದಲ್ಲಿ ಈಗ ಬಿಜೆಪಿಗೆ ಸಿದ್ದಾಂತ ಇಲ್ಲವೇ, ಮಾನ ಮಾರ್ಯಾದೆ ಇಲ್ಲವೇ ಅಧಿಕಾರಕ್ಕಾಗಿ ಏನೂ ಮಾಡಲು ಸಿದ್ದರಾರಿದ್ದರೆ ಎಂದು ನೈಜ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇನ್ನು ಪ್ರವೀಣ್ ನೆಟ್ಟಾರ್ ಅವರಿಗೆ ನ್ಯಾಯ ಮರಿಚಿಕೆಯೇ. ಅವಳಿಗೆ ಪಕ್ಷೇತರ ನಿಲ್ಲಬಹುದಿತ್ತು ಎಂಬ ಕಾಮೆಂಟ್ ಗಳು. ಮೆಸೆಜ್ ಗಳು ಹರುದಾಡುತ್ತಿದೆ.
ಅಧ್ಯಕ್ಷ /ಉಪಾಧ್ಯಕ್ಷ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಉಪಾಧ್ಯಕ್ಷ ಸ್ಥಾನ ಬಂದಿತ್ತು.