ಅರುಣ್ ಪುತ್ತಿಲ ವಿರುದ್ಧ ಮಾನಹಾನಿ ವರದಿ ಮಾಡದಂತೆ ಹೈಕೋರ್ಟ್ ನಿಂದ ತಡೆಯಾಜ್ಞೆ ಪಿತೂರಿ ನಡೆಸುವ ಮೂಲಕ ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ.
ಅರುಣ್ ಪುತ್ತಿಲರು ಸಲ್ಲಿಸಿರುವ ಅಸಲು ದಾವೆಯ ಭಾಗವಾಗಿ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ನಗರದ 7ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾದೀಶರು ಗುರುವಾರ ಪ್ರತಿಬಂಧಕಾಜ್ಞೆ ಹೊರಡಿಸಿದ್ದಾರೆ.
ವಿಮುಕ್ತ ಹರಿಚರಣ್ ಪ್ರಕರಣದ ಪ್ರತಿವಾದಿಯಾಗಿದ್ದಾರೆ. ಪ್ರಕರಣದ ಪ್ರತಿವಾದಿಗಳು ಮತ್ತು ಅವರಿಗೆ ಸಂಬಂಧಿಸಿದ ಯಾವುದೇ ವ್ಯಕ್ತಿಗಳು ದಾವೆಯ ಮುಂದಿನ ವಿಚಾರಣೆಯವರೆಗೆ ದೂರುದಾರ ಪುತ್ತಿಲರವರ ಮಾನಹಾನಿಯುಂಟು ಮಾಡುವ ಯಾವುದೇ ಸುದ್ದಿಗಳನ್ನು ಪ್ರಸಾರ, ಪ್ರಕಟ ಮತ್ತು ಹಂಚಿಕೆ ಮಾಡಬಾರದು.
ಎಂದು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಮತ್ತು ಸಮನ್ಸ್ ಜಾರಿಗೊಳಿಸಲು ಸೆ 24ಕ್ಕೆ ವಿಚಾರಣಯನ್ನು ಮುಂದೂಡಿದ್ದಾರೆ.
ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನ ಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ನೀಡಿರುತ್ತದೆ. ಮಾನ್ಯ ನ್ಯಾಯಾಲಯದ ಆದೇಶದ ಪ್ರತಿಯನ್ನು ಇಲ್ಲಿ ಲಗ್ಗತ್ತಿಸಿರುತ್ತೇವೆ