ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟುರವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರೀಯೆ ನಡೆಸಿಕೊಟ್ಟರು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ನಾಯ್ತೋಟು ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸಂಗೀತ ಪಣೆಮಜಲು ಹಾಗೂ ಕಾಂಗ್ರೆಸ್ ನ ಪದ್ಮಿನಿಯವರು ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿ, ಕಾಂಗ್ರೆಸ್, SDPI, ಸೇರಿ ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುಮಾವಣೆಯಲ್ಲಿ ಸಂಗೀತ ಪಣೆಮಜಲು ಅವರು ದ.ಕ.ಸಂಸದರಾದ ಬ್ರಿಜೇಶ್ ಚೌಟರ ಮತವೂ ಸೇರಿದಂತೆ ಒಟ್ಟು 13 ಮತವನ್ನು ಪಡೆದರೆ, ಕಾಂಗ್ರೆಸ್ ನ ಪದ್ಮಿನಿರವರು SDPI ಅಭ್ಯರ್ಥಿಯ ಒಂದು ಮತ ಸೇರಿ ಒಟ್ಟು 06 ಮತವನ್ನು ಪಡೆದರು. ಈ ಮೂಲಕ ಬಿಜೆಪಿಯ ಸಂಗೀತ ಪಣೆಮಜಲು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ವಿಟ್ಲ ಪಟ್ಟಣ ಪಂಚಾಯತ್‌ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದೆ. ಚುನಾವಣೆ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ , ಮಾಜಿ ಶಾಸಕರಾದ ಸಂಜೀವ ಮಠಂದೂರು , ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ಚಂದ್ರ ಆಳ್ವ, ಸೇರಿದಂತೆ ಉಭಯ ಪಕ್ಷಗಳ ವಿವಿಧ ನೇತಾರರು ಉಪಸ್ಥಿತರಿದ್ದರು.