ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೈ ವಿಸ್ಟಾ ಹೊಟೇಲ್ & ಪಾರ್ಟಿ ಹಾಲ್ ಹೊಟೇಲ್ನಲ್ಲಿ ಮಹಜರು ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಕೇಸ್ ದಾಖಲಾದ ಮರುದಿನ ಮಹಿಳೆಯನ್ನು ಸೆ.2 ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ನಂತರ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಅದರಂತೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಮಹಿಳೆ ನೀಡಿದ ದೂರಿನಲ್ಲಿರುವ ಬೆಂಗಳೂರು ಪೈ ವಿಸ್ಟಾ ಹೋಟೇಲ್ ಗೆ ತೆರಳಿ ಇಂದು ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಕಾನೂನಿನ ಮೂಲಕ ಹೋರಾಟಕ್ಕೆ ತಯಾರಾಗಿದ್ದೇವೆ ಇದೊಂದು ಸುಳ್ಳು ಆರೋಪವಾಗಿದೆ ಎಂದು ನಿನ್ನೆ ಅಂದರೆ ಸೋಮವಾರ ಜಾಮೀನು ಮಂಜೂರಾದ ಬಳಿಕ ಪುತ್ತಿಲ ಮಾಧ್ಯಮಗಳಿಗೆ ತಿಳಿಸಿದ್ದಾರೆ.