ಪುತ್ತೂರು: ಸಮಾಜಕ್ಕಾಗಿ ಕೆಲಸ ಮಾಡುವ ಶಿಕ್ಷಕರ ಜೀವನ ಗೌರವಾನ್ವಿತವಾಗಿದೆ. ಶಿಕ್ಷಕರು ತಮ್ಮ ಮಕ್ಕಳಿಗಿಂತ ಹೆಚ್ಚು ಶಾಲೆಯ ಮಕ್ಕಳನ್ನು ಪ್ರೀತಿ ಮಾಡುತ್ತಿರುವುದನ್ನು ಕಾಣಬಹುದು. ಮನುಷ್ಯನಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಮುಖ್ಯವಾಗಿದೆ. ಶಿಕ್ಷಕ ವೃತ್ತಿ ಬಹಳಷ್ಟು ಸವಾಲಿನಿಂದ ಕೂಡಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಹಾಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ, ಬೆಂಗಳೂರು ಶಿಕ್ಷಕರ ಕಲ್ಯಾಣ ನಿಽ, ಪುತ್ತೂರು ಕ್ಷೇತ್ರ ಶಿಕ್ಷಣಾಽಕಾರಿಗಳ ಕಚೇರಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ- ಗುರುವಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಬೆಳ್ತಂಗಡಿ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಅರವಿಂದ ಚೊಕ್ಕಾಡಿ ಮಾತನಾಡಿರು. ಮರಣ ಹೊಂದಿದ ಶಿಕ್ಷಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು. ಎಸ್‌ಎಲ್‌ಎಲ್‌ಸಿ ಸಾಧಕ ಮಕ್ಕಳಿಗೆ ಅಭಿನಂದನೆ ನಡೆಯಿತು. ಆನಡ್ಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶುಭಲತಾ ೫೦ ಸಾವಿರದ ದತ್ತಿನಿಽ ಹಸ್ತಾಂತರ ಮಾಡಿದರು.
ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀನಾಥ್, ತಹಸೀಲ್ದಾರ ಪುರಂದರ, ಪೌರಾಯುಕ್ತ ಮಧು ಎಸ್. ಮನೋಹರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಽಕಾರಿ ನವೀನ್ ಭಂಡಾರಿ, ಶಿಕ್ಷಣ ಇಲಾಖೆಯ ನಿವೃತ್ತ ಸಹನಿರ್ದೇಶಕ ವಾಲ್ಟರ್ ಡಿ ಮೆಲ್ಲೊ, ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ನವೀನ್ ವೇಗ್, ವಿವಿಧ ಶಿಕ್ಷಕ ಸಂಘಟನೆಯ ಪದಾಽಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಽಕಾರಿ ಲೋಕೇಶ್ ಎಸ್. ಆರ್. ಸ್ವಾಗತಿಸಿ ಪ್ರಸ್ತಾವನೆಗೈದರು. ಶಶಿಕಲಾ ಸಂಸ್ಮರಣೆ ಮಾಡಿದರು. ತನುಜಾ ಪ್ರಶಸ್ತಿ ವಿಜೇತರ ಪಟ್ಟಿ ಓದಿದರು. ಪ್ರಭಾರ ಕ್ಷೇತ್ರ ಸಮನ್ವಯಾಽಕಾರಿ ನವೀನ್ ವೇಗಸ್ ವಂದಿಸಿದರು. ಬಾಲಕೃಷ್ಣ ಪೊರ್ದಾಳ್, ಪರಮೇಶ್ವರಿ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.