ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.