ಬೆಂಗಳೂರು: ಸೆ.8-16ರವರೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ವಾಷಿಂಗ್ಟನ್ಗೆ ಭೇಟಿ ನೀಡುತ್ತಿದ್ದಾರೆ.
ಈ ಭೇಟಿ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿದ್ದು, ವಿಶೇಷ ಆಹ್ವಾನದ ಮೇರೆಗೆ ಡಿಕೆ.ಶಿವಕುಮಾರ್ ಅವರು ಅಮೆರಿಕಾಗೆ ಭೇಟಿ ನೀಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿರುವ ಡಿ ಕೆ.ಶಿವಕುಮಾರ್ ಅವರು, ಈ ಭೇಟಿ ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶಗಳಿಲ್ಲ ಎಂದು ಹೇಳಿದ್ದಾರೆ. ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ.
ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ಅವರು ವಿನಂತಿಸಿಕೊಂಡಿದ್ದಾರೆ.