ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜತೆಗೆ ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಮತ್ತಿತರರು ಉಪಸ್ಥಿತರಿರಲಿದ್ದಾರೆ. ರಾಜ್ಯ ಬಿಜೆಪಿ ಭಿನ್ನಮತಕ್ಕೆ ಬ್ರೇಕ್ ಹಾಕಲು ಆರ್‌ಎಸ್ಎಸ್ ಮುಂದಾ ಗಿದ್ದು, ಗುರುವಾರ ಬಿಜೆಪಿಯ ಹಿರಿಯ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ. ಮಾಗಡಿ ರಸ್ತೆಯ ಚನ್ನೇನಹಳ್ಳಿಯ ಸಂಘದ ಸಂಸ್ಥೆಯಲ್ಲಿ ಸಭೆ ಕರೆದಿದ್ದು, ಬಿಜೆಪಿಯ ಕೋರ್‌ಕಮಿಟಿ ಸದಸ್ಯರು ಹಾಗೂ ಅತೃಪ್ತರು ಸೇರಿ 40 ನಾಯಕರನ್ನು ಆಹ್ವಾನಿಸಿದೆ.