ಎರಡು ತಿಂಗಳಲ್ಲಿ ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು.ಸೆ.11.ಮುಡಾ ಪ್ರಕರಣದಲ್ಲಿ ಸಿಎಂ ಇಕ್ಕಟ್ಟಿಗೆ ಸಿಲುಕಿಸಿ, ರಾಜೀ ನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತಂತ್ರಕ್ಕೆ ಪ್ರತಿತಂತ್ರವಾಗಿ ವಿಪಕ್ಷಗಳ ಅಧಿಕಾರವಧಿಯ ಹಗರಣಗಳ ತನಿಖೆಗೆ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಐವರು ಸಚಿವರ ಸಮಿತಿ ರಚಿಸಲಾಗಿದೆ.