ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ಹಿನ್ನಲೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತನ್ನ ಬೆಂಬಲಿಗರೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತಾನಾಡಿದ ಅವರು ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ನನಗೆ ಉಳ್ಳಾಲ್ತಿ ಮತ್ತು ಮಹಾಲಿಂಗೇಶ್ವರ ದೇವರ ಮೇಲೆ ನಂಬಿಕೆ ಇದೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎನ್ನುವ ವಿಶ್ವಾಸವಿದೆ ಎಂದರು.
ಭಾರತೀಯ ಜನತಾ ಪಾರ್ಟಿ ನನ್ನ ಹಿಂದೆ ನಿಂತಿದ್ದು, ನನ್ನ ಸಂಕಷ್ಟದ ದಿನದಲ್ಲಿ ನನಗೆ ಸಹಕರಿಸಿದ ಬಿಜೆಪಿ ಮುಖಂಡರಿಕೆ ದೇವ ದುರ್ಬಲ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕೊನೆಯ ಉಸಿರಿನ ವರೆಗೂ ಹಿಂದುತ್ವಕ್ಕಾಗಿ ಹೋರಾಡುತ್ತೇನೆ ಭಾರತೀಯ ಜನತಾ ಪಕ್ಷವನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಟಗೊಳಿಸುತ್ತೇನೆ ಎಂದರು. ಈ ಸಂಧರ್ಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.