ದೇಶವನ್ನು ವಿಭಜಿಸುವ ಶಕ್ತಿಗಳ ಪರ ನಿಲ್ಲುವುದು, ರಾಷ್ಟ್ರ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂಸದ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮಾತುಗಳು ಮತ್ತು ಮೀಸಲಾತಿ ವಿರೋಧಿ ಅಜೆಂಡಾ ಆಗಿರಬಹುದು ಅಥವಾ ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದು. ರಾಹುಲ್ ಗಾಂಧಿಗೆ ದೇಶದ ಜನರ ಭಾವನೆಗಳಿಗೆ ಧಕ್ಕೆ ತರುವುದೇ ಕೆಲಸ ಎಂದು ಹೇಳಿದರು.
ರಾಹುಲ್ ಗಾಂಧಿ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಸೃಷ್ಟಿಸುವ ಕಾಂಗ್ರೆಸ್‌ನ ರಾಜಕೀಯವನ್ನು ಬಹಿರಂಗಪಡಿಸುತ್ತದೆ. ದೇಶದಿಂದ ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಹೊರತಂದಿದ್ದಾರೆ.
ಅವರ ಮನಸ್ಸಿನಲ್ಲಿದ್ದ ವಿಚಾರಗಳು ಮಾತಿನ ರೂಪದಲ್ಲಿ ಹೊರಬಂದಿವೆ. ಬಿಜೆಪಿ ಇರುವವರೆಗೂ ಮೀಸಲಾತಿಯನ್ನು ಯಾರೂ ರದ್ದು ಮಾಡಲು ಸಾಧ್ಯವಿಲ್ಲ ಮತ್ತು ದೇಶದ ಭದ್ರತೆಯೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದರು.
ಅಮೆರಿಕ ಪ್ರವಾಸದ ವೇಳೆ ರಾಹುಲ್ ಗಾಂಧಿ ಅಲ್ಲಿನ ಭಾರತೀಯ ಅಮೆರಿಕನ್ ಸಮುದಾಯದ ನೂರಾರು ಜನರೊಂದಿಗೆ ಸಂವಾದ ನಡೆಸಿದರು. ಆರ್ಎಸ್ಎಸ್ ಕೆಲವು ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.