ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು ಪೊಲೀಸ್ ಸೇರಿ ಹಲವರಿಗೆ ಗಾಯಗಳಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಇದು ರಾಜ್ಯ ಸರ್ಕಾರದ ವೈಫಲ್ಯ :ಅರುಣ್ ಕುಮಾರ್ ಪುತ್ತಿಲ
ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣವೇ ಇಂತಹ ಘಟನೆಗಳು ಮರುಕಳಿಸಲು ಮುಖ್ಯ ಕಾರಣ. ಹಿಂದೂ ಸಮಾಜದ ತಾಳ್ಮೆಯನ್ನು ದೌರ್ಬಲ್ಯವೆಂದು ಪರಿಗಣಿಸಿಸದಿರಿ. ಸ್ವಾರ್ಥ – ತುಷ್ಟೀಕರಣವನ್ನು ಕೈ ಬಿಟ್ಟು ಸಂವಿಧಾನ ಬದ್ಧರಾಗಿ ಸರ್ಕಾರ ನಡೆಸಿ ಸಮಾಜದಲ್ಲಿ ಶಾಂತಿ ಸ್ಥಾಪನೆ ಮಾಡಲು ಸರ್ಕಾರಕ್ಕೆ ಈ ಮೂಲಕ ಆಗ್ರಹ ಮಾಡುತ್ತೇವೆ.ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂಧರ್ಭದಲ್ಲಿ ನಡೆದಿರುವ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇವೆ