ನಾಗಮಂಗಲ : ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣ ಇನ್ ಸ್ಪೆಕ್ಟರ್ ಅಶೋಕ್ ಕುಮಾರ್ ಅಮಾನತು
ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಘರ್ಷಣೆ ಉಂಟಾಗಿದೆ. ಈ ಸಂಬಂಧ 150 ಮಂದಿಯ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ.
ಸಿಸಿ ಕ್ಯಾಮೆರಾ ಪುಟೇಜ್ ಆಧರಿಸಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸುತ್ತಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡ 97 ಮಂದಿಯ ಹುಡುಕಾಟ ನಡೆಸುತ್ತಿದ್ದಾರೆ.
ಈಗಾಗಲೇ 52 ಮಂದಿಯ ಬಂಧನ ಮಾಡಲಾಗಿದೆ.