ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಪ್ರಸ್ತುತ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು ಆಕಾಂಕ್ಷಿ ಪಟ್ಟಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳೀನ್ ಕುಮಾರ್ ಹೆಸರು ಮುನ್ನಲೆಯಲಿದ್ದು ಈ ದಿನದ ಸಭೆಯಲ್ಲಿ ಕಟೀಲ್ ಭಾಗವಹಿಸಿದ್ದು ಅಚ್ಚರಿ ಬೆಳವಣಿಗೆಯಾಗಿದೆ.
ಬೆಂಗಳೂರಿನ ಬಿಜೆಪಿ ರಾಜ್ಯ ಕೇಂದ್ರ ಕಾರ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯದ ಭಾಜಪಾ ಕೋರ್ ಕಮಿಟಿ ಸಭೆಯಲ್ಲಿ ಅವರು ಭಾಗವಹಿಸಿದ್ದು ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ, ವಿಧಾನಸಭಾ ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಶಾಸಕರುಗಳಾದ ಡಾ. ಅಶ್ವಥ್ ನಾರಾಯಣ್, ಶ್ರೀ ಸಿ.ಟಿ. ರವಿ, ಪ್ರಮುಖರಾದ ಶ್ರೀ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.