ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಜನಸಂಘದ ಮೂಲಕ ದೇಶದಲ್ಲಿ ಪಕ್ಷವನ್ನು ಬೆಳೆಸಿದ ಪಂಡಿತ್ ದೀನದಯಾಳ್ ಉಪಾಧ್ಯಾಯರ 108 ನೇ ಜನ್ಮದಿನವನ್ನು ಆಚರಿಸಲಾಯಿತು.
ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಅವರು ದಿಕ್ಸೂಚಿ ಭಾಷಣ ಮಾಡಿದರು. ಪಕ್ಷದ ಹಿರಿಯರಾದ ಮೋಹನದಾಸ್ ಉಕ್ಕುಡ, ರಾಮದಾಸ್ ಶೆಣೈ, ಶ್ಯಾಮ್ ಭಟ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಹಾಗೂ ಅವರು ಸಂಘಟನೆಗೆ ದುಡಿದ ವಿಷಯದಲ್ಲಿ ಮಾತನಾಡಿದರು.

ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯಕುಮಾರ್ ಆಲಂಗಾರು ಸ್ವಾಗತಿಸಿದರು, ಗ್ರಾಮಾಂತರ ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ ವಿಟ್ಲ ವಂದಿಸಿದರು.
ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಹರೀಶ್ ಸಿಎಚ್, ಶಕ್ತಿ ಕೇಂದ್ರ ಪ್ರಮುಖರಾದ ಶಿಶಿರ್ ಗೌಡ, ಸದಾನಂದ ಗೌಡ, ವ್ಯವಸಾಯ ಬ್ಯಾಂಕ್ ಅಧ್ಯಕ್ಷ ನರ್ಸಪ್ಪ ಪೂಜಾರಿ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಯುವಮೋರ್ಚಾ ಮಂಡಲ ಕಾರ್ಯದರ್ಶಿ ನಿತಿನ್ ಬೊಡ್ಡೋಣಿ, ಎಸ್ಟಿ ಮೋರ್ಚಾ ಜಿಲ್ಲಾ ಸದಸ್ಯರಾದ ರಾಜೇಶ್ ಅನ್ನಮೂಲೆ ಹಾಗೂ ಪಕ್ಷದ ಅನೇಕ ಹಿರಿಯ ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
























