ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯು ಅಂಗಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆ ಅಂಗಡಿಯ ವ್ಯಾಪಾರ ಪರ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಮನವಿ ನೀಡಿದ್ದರು.
ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.