ಒಳಮೊಗ್ರು ಗ್ರಾಮ ಅಜ್ಜಿಕಲ್ಲು ಕಾರ್ಯಕ್ಷೇತ್ರದ ಕೈಕಾರ ಜನನಿ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಸರೋಜಿನಿ ಇವರು ವಹಿಸಿದ್ದರು
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಶಾಲಾ ಮುಖ್ಯ ಗುರುಗಳಾದ ರಾಮಣ್ಣ ರೈ ಇವರು ಮಾತನಾಡುತ್ತಾ ಜ್ಞಾನವಿಕಾಸ ಕಾರ್ಯಕ್ರಮಗಳಿಂದ ಮಹಿಳೆಯರಲ್ಲಿ ಬದಲಾವಣೆಯಾಗಿದೆ, ಸಮಾಜದ ಮುಖ್ಯ ವಾಹಿನಿಗೆ ಬಂದು ತಮ್ಮ ಕುಟುಂಬವನ್ನು ಬಲಿಷ್ಠರಾಗಿಸಿದ್ದಾರೆ. ಇನ್ನು ಮುಂದೆ ಇಂಥ ಕಾರ್ಯಕ್ರಮಗಳು ನಡೆಯಲಿ ಮಹಿಳೆಯರಲ್ಲಿ ಬದಲಾವಣೆಯ ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಯಾದ SDM ಕಾಲೇಜು ಉಜಿರೆಯ ಶಿಕ್ಷಕರಾದ ಶೋಭಾ ಚರಣ್ ರಾಜ್ ಇವರು ಸಂಸ್ಕೃತಿ ಮತ್ತು ಸಂಸ್ಕಾರಗಳ ಬಗ್ಗೆ ಮಾತನಾಡಿ ಜ್ಞಾನವಿಕಾಸ ಕೇಂದ್ರದಲ್ಲಿ ಉತ್ತಮ ಸಂಸ್ಕಾರಗಳನ್ನು ನೋಡಬಹುದು. ಈ ಸಂಸಾರಗಳನ್ನು ತಮ್ಮ ಮಕ್ಕಳಿಗೂ ಅರಿವಾಗುವಂತೆ ಮಾಡಬೇಕು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಸೋಹಾನ್ ಗೌಡ, ಪ್ರಗತಿಪರ ಕೃಷಿಕರಾದ ಚಂದ್ರಹಾಸ ರೈ, ಸ್ಥಳೀಯ ನಿವೃತ್ತ ಶಿಕ್ಷಕರಾದ ಶಾರದಾ ಶೆಟ್ಟಿ ಕೈಕಾರ ,ಒಕ್ಕೂಟದ ಅಧ್ಯಕ್ಷರಾದ ಸರೋಜ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಸ್ಥಳೀಯರು ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ವಾರ್ಷಿಕೋತ್ಸವದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ7 ಕಾರ್ಯಕ್ರಮವನ್ನು ನಿರೂಪಿಸಿದರು, ಸೇವಾ ಪ್ರತಿನಿಧಿ ತ್ರಿವೇಣಿ ಪಲ್ಲತ್ತಾರು ಸ್ವಾಗತಿಸಿದರು, ಕೇಂದ್ರದ ಸದಸ್ಯೆ ವಿಮಲಾ ಧನ್ಯವಾದವನ್ನು ಮಾಡಿದರು.