ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಮಟ್ಟದಲ್ಲಿ ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ ಜನರಿಗೆ ಯಶಸ್ವಿಯಾಗಿ ಅರಿವು ಮೂಡಿಸಿ ಜಾಗೃತಿ ನಡೆಸಿದ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಸಂಘ (ರಿ) ಇದರ ಮೇಲ್ವಿಚಾರಕರಾಗಿರುವ ಸೌಮ್ಯಲತಾ ಇವರಿಗೆ ಪುರಸ್ಕಾರ ಲಭಿಸಿದೆ.
ಸ್ಚಚ್ಚ ಭಾರತ್ ಪರಿಕಲ್ಪನೆಯಲ್ಲಿ ದೇಶ ಸಾಗುತ್ತಿದ್ದು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರ ತನಕ ತನ್ನ ಕಾರ್ಯಕ್ಷೇತ್ರದಲ್ಲಿ ನಗರ ಪ್ರದೇಶಗಳಲ್ಲಿ ಗ್ರಾಮಗಳ ಊರಿನಲ್ಲಿ ಸ್ವಚ್ಚತೆಯೇ ಬಗ್ಗೆ ಅರಿವು ಕಾರ್ಯಕ್ರಮ ನಡೆಸಿ ಆಯ್ಕೆಯಾದ ಸುಳ್ಯ ತಾಲೂಕಿನ ಏಕೈಕ ಗ್ರಾಮ ಪಂಚಾಯತ್ ಇದಾಗಿದೆ. ಗಾಂಧಿ ಜಯಂತಿಯಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಗಾಂಧಿ ಪ್ರತಿಮೆ ಬಳಿ ನಡೆಯದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಪ್ರಶಸ್ತಿ ನೀಡಿ ಗೌರವಿಸಿದರು. ಉನ್ನತ ಪೋಲಿಸ್ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.