ಪುತ್ತೂರು: ಮಂಗಳೂರಿನಲ್ಲಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ಕಡಿವಾಣ ವಿಧಿಸಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಗೆ ಸಂಬಂಧಿಸಿ ಉಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಿ ಸರಕಾರದ ಸುತ್ತೋಲೆಗೆ ತಡೆಯಾಜ್ಞೆ ಒದಗಿಸಿಕೊಟ್ಟು ಸಹಕಾರ ಸಂಘಗಳಿಗೆ ನ್ಯಾಯ ಕೊಡಿಸಿದ ಹಿರಿಯ ನ್ಯಾಯವಾದಿ ಪದ್ಮಪ್ರಸಾದ್ ಹೆಗ್ಡೆ ಅವರನ್ನು ದ.ಕ. ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘಗಳು ಮತ್ತು ಪಿಗ್ಮಿ ಏಜೆಂಟರ ಯೂನಿಯನ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವೆಂಕಟೇಶ್ ಎ., ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ ಜೈನ್, ಮಹಾವೀರ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿ ವರ್ಗ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಉದ್ಯಮಿ ದಿನೇಶ್ ಕಲ್ಲಡ್ಕ, ದ.ಕ. ಜಿಲ್ಲಾ ಪಿಗ್ಮಿ ಏಜೆಂಟರ ಯೂನಿಯನ್ ಅಧ್ಯಕ್ಷ ಪುರುಷೋತ್ತಮ ಪ್ರಭು ಉಪಸ್ಥಿತರಿದ್ದರು. ಸಹಾಯಕ ಪ್ರಬಂಧಕ ವಿಶ್ವನಾಥ್ ವಂದಿಸಿದರು.