ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪಕ್ಷದ ಹಿರಿಯರ ಹಾಗೂ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.
ನಾಪಪತ್ರ ಸಲ್ಲಿಕೆಯ ಮೊದಲು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು. ನಂತರ ಜಿಲ್ಲಾ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಂದಾಪುರ, ಉಭಯ ಜಿಲ್ಲೆಯ ಶಾಸಕರುಗಳಾದ ಶ್ರೀ ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಭಾಗೀರಥಿ ಮುರುಳ್ಯ, ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಮಾಜಿ ಶಾಸಕರುಗಳು ಪಕ್ಷದ ಅನ್ಯಾನ್ಯ ಜವಾಬ್ದಾರಿಯ ಮಿತ್ರರು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.