ಪುತ್ತೂರು :ಪ್ರತೀ ವರ್ಷ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ದೀಪಾವಳಿ ಸಂದರ್ಭದಲ್ಲಿ ನಡೆಯುವ ವಸ್ತ್ರವಿತರಣಾ ಸಮಾರಂಭ ‘ಅಶೋಕ ಜನಮನ- 2024’ ನ.2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.
ಶುಕ್ರವಾರ ಟ್ರಸ್ಟ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರ್ಷದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಪಕ್ಷ, ಜಾತಿ, ಮತ ಬಿಟ್ಟು ಎಲ್ಲರನ್ನು ಸೇರಿಸಿಕೊಂಡು ಮಾಡುವ ಕಾರ್ಯಕ್ರಮ. ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ಬಾರಿ 75000 ಜನಕ್ಕೆ ವಸ್ತ್ರ ವಿತರಣೆ ಹಾಗೂ 40 ರಿಂದ 45 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ನೀಡಲಾಗುವ ಹೆಸರುಗಳ ಕುರಿತು ಈಗಾಗಲೇ 400 ಹೆಸರುಗಳು ಬಂದಿದ್ದು, ಆಯ್ಕೆಗೊಳಿಸಿ ಹೆಸರನ್ನು ಇಡಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿಯಂತೆ ಈ ಬಾರಿಯೂ ಗೂಡು ದೀಪ ಸ್ಪರ್ಧೆಗಳನ್ನು ಏರ್ಪಡಿಸಿ,
ಪ್ರಥಮ:10.000, ದ್ವಿತೀಯ:7000, ತೃತಿಯ 5,000 ರೂ. ನೀಡಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದ ಯಶಸ್ವಿಗಾಗಿ ಗ್ರಾಮಗಳಿಗೆ ಭೇಟಿ ನೀಡುವ ತಂಡಗಳನ್ನು ಈಗಾಗಲೇ ರಚಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಇರುವುದರಿಂದ, ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಗ್ರಾಮಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಉಳಿದಂತೆ ಆಮಂತ್ರಣವನ್ನು ವಾಟ್ಸಪ್ ನಲ್ಲಿ ಎಲ್ಲರಿಗೂ ಕಳುಹಿಸುವ ಕುರಿತು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಕಳೆದ ಬಾರಿಯಂತೆ ಸಮಾಜದಲ್ಲಿ ಸೂಕ್ಷ್ಮ ವಲಯದಲ್ಲಿ ಕೆಲಸ ಮಾಡುವವರು, ಇದುವರೆಗೆ ಯಾರೂ ಗುರುತಿಸಿಸದವರಿಗೆ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಕಾವು ಹೇಮನಾಥ ಶೆಟ್ಟಿ, ರಸ್ತೆನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ನಿಹಾಲ್ ರೈ, ಅಮಲ ರಾಮಚಂದ್ರ, ಮುರಳೀದರ ರೈ ಮಠಂತಬೆಟ್ಟು, ನಿರಂಜನ್ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರು, ಕೃಷ್ಣಪ್ರಸಾದ್ ಬೊಳ್ಳಾವು ಉಪಸ್ಥಿತರಿದ್ದರು. ಬಾಲಕೃಷ್ಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.