ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು. ಇದೀಗ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ ಎಂಬುವವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ಮತ್ತು ಇಲಾಖೆಯ ಜಂಟಿ ನಿಯಂತ್ರಕರೂ ಆಗಿದ್ದ ರಘು ಜಿ.ಪಿ ಎಂಬುವವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು. ಇದರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಅಕ್ರಮ ನಡೆಸಿರುವ ಆರೋಪ ಮಾಡಲಾಗಿತ್ತು. ವೆಂಟಿಲೇಟರ್, ನಿರ್ವಹಣೆ ಲೋಪ, ಆಕ್ಸಿಜನ್ ಉಪಕರಣಗಳ ಖರೀದಿ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿತ್ತು. ಇದೀಗ ಓರ್ವ ಅಧಿಕಾರಿಯನ್ನು ಸರ್ಕಾರ ಅಮಾನತುಗೊಳಿಸಿದೆ.
ಮಧ್ಯಂತರ ವರದಿ?
ಇನ್ನು ಈ ವರದಿಯಲ್ಲಿ ಆಗಸ್ಟ್ 25, 2023ರಲ್ಲಿ ರಚನೆಯಾಗಿದ್ದ ತನಿಖಾ ಆಯೋಗದಿಂದ ಬಿಬಿಎಂಪಿ ವಿವಿಧ ವಲಯಗಳು ಹಾಗೂ ಇಲಾಖಾವಾರು ಭರಿಸಿರುವ ವೆಚ್ಚದ ಮಾಹಿತಿ ಉಲ್ಲೇಖಿಸಲಾಗಿದೆ. ಆರೋಗ್ಯ ಇಲಾಖೆಗೆ 1,754 ಕೋಟಿ ರೂ, ರಿಲೀಸ್ ಮಾಡಲಾಗಿತ್ತು. ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ 1,406 ಕೋಟಿ ರೂ., ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ 918 ಕೋಟಿ ರೂ., ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ 1,394 ಕೋಟಿ ರೂ. ವೈದ್ಯಕೀಯ ಸಲಕರಣೆಗಳ ಖರೀದಿಗೆ 1,394 ಕೋಟಿ ರೂ., ಔಷಧಗಳ ಖರೀದಿಗೆ 569 ಕೋಟಿ ರೂಪಾಯಿ ಸೇರಿದಂತೆ ವಿವಿಧ ವಲಯಗಳಿಗೆ ಹಣ ಬಿಡುಗಡೆ ಮಾಡಲಾಗಿತ್ತು.