ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೊಬ್ಬರಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಮಂಗಳೂರು, ಅಕ್ಟೋಬರ್ 08: ಮಂಗಳೂರು ಕೇಂದ್ರ ಅಪರಾಧ ವಿಭಾಗ (CCB)ದ ಪೊಲೀಸರು ಅತಿದೊಡ್ಡ ಡ್ರಗ್ ಜಾಲ ಪತ್ತೆ ಹಚ್ಚಿದ್ದಾರೆ. ರಾಜ್ಯದ ವಿವಿಧಡೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬರೋಬ್ಬರಿ ಆರು ಕೆ.ಜಿಯ ಆರು ಕೋಟಿ ರೂ. ಮೌಲ್ಯದ ಎಂಡಿಎಂ ಡ್ರಗ್ ವಶಪಡಿಸಿಕೊಂಡಿದ್ದಾರೆ. ಇದು ಮಂಗಳೂರು ನಗರ ಇತಿಹಾಸದಲ್ಲೇ ಅತೀ ದೊಡ್ಡ ಕಾರ್ಯಾಚರಣೆಯಾಗಿದೆ ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನೈಜೀರಿಯಾ ಪ್ರಜೆಯ ಕೈವಾಡ ಇರುವುದು ತಿಳಿದುಬಂದಿದೆ. ನೈಜೀರಿಯಾ ಪ್ರಜೆಯ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಆತ ಬೆಂಗಳೂರಿನಲ್ಲಿ ವಾಸವಿರುವುದು ತಿಳಿದಿದೆ. ಕೂಡಲೆ ಕಾರ್ಯಪ್ರವೃತರಾದ ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.
ನೈಜೀರಿಯಾ ಪ್ರಜೆ ಬಳಿ ಇದ್ದ 17 ಸಿಮ್ ಕಾರ್ಡ್, ಆತನ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ