ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ಗ್ರಾಮಾಂತರ ಮಂಡಲ ನಿಕಟಪೂರ್ವ ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಹಾಗೂ ಸಹ ಸಂಚಾಲಕರಾಗಿ ನಗರ ಮಂಡಲ ಉಪಾಧ್ಯಕ್ಷರಾಗಿರುವ ಸಂತೋಷ್ ಕುಮಾರ್ ಕೈಕಾರ ಇವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ಸಮಿತಿ ನಿಯುಕ್ತಿಗೊಳಿಸಿರುತ್ತಾರೆ.
ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರಿಗೆ ಮತದಾನ ಮಾಡುವ ಅವಕಾಶ ಇರುತ್ತದೆ. ಬಿಜೆಪಿ ಅಭ್ಯರ್ಥಿಯಾಗಿ ಪುತ್ತೂರಿನವರೇ ಆದ ಕಿಶೋರ್ ಕುಮಾರ್ ಬೊಟ್ಯಾಡಿ ಕಣದಲ್ಲಿ ಇದ್ದಾರೆ.



 
                                









 
			










 
		