ಬಂಟ್ವಾಳ: ತನ್ನ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಹಿಂದೂ ಸಂಘಟನೆಯ ಮುಖಂಡನನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಉದ್ಯಮಿ ಹಾಗೂ ಹಿಂದೂ ಯುವಸೇನೆಯ ಮುಖಂಡ, ಪುಷ್ಪರಾಜ್ ಎಂಬವರಿಗೆ ಚೂರಿಯಿಂದ ಇರಿದಿದ್ದು ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಈ ಘಟನೆ ಸಂಭವಿಸಿದ್ದು ಚೂರಿ ಇರಿತಕ್ಕೆ ನೈಜವಾದ ಕಾರಣ ತಿಳಿದುಬಂದಿಲ್ಲ.
ರಿಕ್ಷಾದಲ್ಲಿ ಜೊತೆಯಾಗಿ ತೆರಳುತ್ತಿದ್ದಾಗಲೇ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ ಕೃತ್ಯ ಎಸಗಿದಾತನು ತನ್ನ ಸ್ನೇಹಿತ ರವಿ ಎಂದು ಸ್ಪಷ್ಟಪಡಿಸಿದ್ದಾರೆ.ಆರೋಪಿ ರವಿ ಚೂರಿಯಿಂದ ಇರಿದು ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಬಗ್ಗೆ ವರದಿಯಾಗಿದೆ.