ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ.
ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ ಸ್ವೀಕರಿಸುತ್ತಾರೆ.ಇದೀಗ ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರ ವಿಶೇಷ ಕಾಳಜಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರ ಚಿಂತನಾತ್ಮಕ ಯೋಜನೆ ಮೇರೆಗೆ ಪ್ರಸಾದ ಬೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆಗಳನ್ನು ತರಲಾಗಿದೆ.ಇದರಿಂದಾಗಿ ಭಕ್ತರಿಗೆ ವಿಶೇಷ ಬೋಜನ ಪ್ರಸಾದ ಪ್ರತಿದಿನ ದೊರಕುವಂತಾಗಿದೆ.
‘ಅನ್ನದಾತ ಸುಬ್ಬಪ್ಪ’ ಪ್ರತೀತಿಯ ಈ ದೇವಳದಲ್ಲಿ ಪ್ರಸಾದ ವ್ಯವಸ್ಥೆಯಲ್ಲಿ ಈ ಬದಲಾವಣೆಗಳನ್ನು ತಂದವರು ದೇವಳದ ಆಡಳಿತಾಧಿಕಾರಿಯೂ ಆಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ. ಇವರಿಬ್ಬರ ವಿಶೇಷ ಆಸಕ್ತಿ ಫಲವಾಗಿ ಭೋಜನ ಪ್ರಸಾದವು ಮತ್ತಷ್ಟು ವಿಶೇಷವೆನಿಸಲಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 55ಲಕ್ಷಕ್ಕೂ ಹೆಚ್ಚು ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಸಂಪ್ರದಾಯದಂತೆ ಇಲ್ಲಿ ಬಾಳೆ ಎಲೆಯಲ್ಲಿ ಪ್ರಸಾದ ನೀಡಲಾಗುತ್ತದೆ. ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ನೀಡಲಾಗುತ್ತದೆ. ಜಾತ್ರೆ ಸೇರಿದಂತೆ ವಿಶೇಷ ದಿನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸುತ್ತಾರೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.
“ಶ್ರೀ ದೇವಳದಲ್ಲಿ ಬೋಜನವು ಕೂಡಾ ಒಂದು ಅಮೂಲ್ಯವಾದ ಪ್ರಸಾದ.ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗುವುದು.ಅಲ್ಲದೆ ಭಕ್ತರಿಗೆ ಬೋಜನ ಪ್ರಸಾದ ಸ್ವೀಕಾರ ಸುಲಲಿತಗೊಳಿಸಲು ಬೇಕಾದ ಉತ್ತಮ ಯೋಜನೆ ನಡೆಸಲಾಗುವುದು. ಇದರೊಂದಿಗೆ ಭಕ್ತರಿಗೆ ಸೂಕ್ತವಾದ ಅನುಕೂಲತೆ ಒದಗಿಸುವ ಮೂಲಕ ದೇವರ ಸೇವೆಯನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ”
“ ಭಕ್ತರಿಗೆ ಪೌಷ್ಟಿಕಾಂಶ ಭರಿತವಾದ ವಿಶೇಷ ಬೋಜನ ಪ್ರಸಾದ ವಿತರಿಸುವ ದೃಷ್ಠಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.ಇದರಿಂದಾಗಿ ಭಕ್ತರು ಸ್ವಾದಿಷ್ಠವಾದ ಪ್ರಸಾದ ಸ್ವೀಕರಿಸಲು ಅನುಕೂಲತೆಯಾಗಿದೆ.ವಿವಿಧ ಬಗೆಯ ಪಾಯಸ, ವಿವಿಧ ತರಕಾರಿಗಳ ಸಾಂಬಾರನ್ನು ಇದೀಗ ತಯಾರಿಸಲಾಗುತ್ತಿದೆ.ಬೋಜನ ಪ್ರಸಾದ ವಿತರಣೆ ಮತ್ತು ತಯಾರಿಕೆಯ ವ್ಯವಸ್ಥೆಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ”
ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ