ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳು ವೇಶ್ಯೆಯರು ಎಂದಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್
ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಜೀವ ಪೂಜಾರಿ ಕಾಣಿಯೂರು ಮಂಗಳೂರು(ಅ.17): ಬಿಲ್ಲವ ಸಮಾಜದ 1 ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದ ಅರಣ್ಯಾಧಿಕಾರಿ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ
ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ 79 ಸೆಕ್ಷನ್ ನಡಿ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ದೂರು ನೀಡಿದರೂ ಪ್ರಕರಣ ದಾಖಲಿಸದ ಹಿನ್ನೆಲೆ ನಾಳೆ ಪ್ರತಿಭಟನೆಗೆ ಹಿಂಜಾವೇ ಕರೆ ನೀಡಿತ್ತು. ಹಿಂಜಾವೇ ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ. ಹಿಂದೂ ಹೆಣ್ಮಕ್ಕಳ ಬಗ್ಗೆ ಸರ್ಕಾರಿ ಅಧಿಕಾರಿ ನಾಲಿಗೆ ಹರಿಬಿಟ್ಟಿದ್ದ , ಸರ್ಕಾರಿ ಅಧಿಕಾರಿಯ ಆಡಿಯೋ ಕರಾವಳಿಯಲ್ಲಿ ಭಾರೀ ವಿವಾದ ಸೃಷ್ಟಿಸಿತ್ತು.
ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂಳೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ, ಹಿಂದುತ್ವದ ಹುಡುಗರು ಸೂಳೆಯರನ್ನಾಗಿ ಮಾಡಿದ್ದಾರೆ. ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ದೂರವಾಣಿಯಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಸಂಜೀವ ಪೂಜಾರಿ ಹೇಳಿಕೆ ನೀಡಿದ್ದರು.