ಪುತ್ತೂರು: ಕಡೆಯಿಂದ ಹಣ್ಣು ಹಂಪಲನ್ನು ಕೊಂಡು ಹೋಗುತ್ತಿದ್ದ ಆಟೋರಿಕ್ಷಾಕ್ಕೆ ಕೇಪುಳ್ ವೃತ್ತದ ಬಲಿ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಆಟೋ ಚಾಲಕರಿಬ್ಬರಿಗೂ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಬಂದು ಕೇಸು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಡಿಕ್ಕಿಯಾದ ವಾಹನಗಳನ್ನು ತೆರೆವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.