ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು(ಅಕ್ಟೋಬರ್ 25) ನಾಮಪತ್ರ ಸಲ್ಲಿಕೆ ಮಾಡಿದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಜತೆಯಾಗಿ ನಿಖಿಲ್ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಇನ್ನು ನಿಖಿಲ್ ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರ ನೀಡಿದ್ದು, ನಿಖಿಲ್ 113 ಕೋಟಿ ರೂ. ಮೌಲ್ಯದ ಆಸ್ತಿ ಒಡೆಯರಾಗಿದ್ದಾರೆ, ಇನ್ನು ಅವರ ಪುತ್ರ ವ್ಯಾನ್ ದೇವ್ ಹೆಸರಿನಲ್ಲಿ 11ಲಕ್ಷ ರೂ. ಹಣ ಇದ್ದರೆ, ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ.
ಬಿಬಿಎ ಪದವೀಧರನಾಗಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರ ನಿಖಿಲ್, ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ.
ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ. ಇನ್ನು ನಿಖಿಲ್ ಹೆಸರಲ್ಲಿ ಒಟ್ಟು 70.44 ಕೋಟಿ ಸಾಲ ಇದೆ. ತಮ್ಮ ಪತ್ನಿ ಹೆಸರಲ್ಲಿ 4.96 ಕೋಟಿ ರೂ. ಸಾಲ ಇದೆ ಎಂದು ಆಸ್ತಿ ವಿವರದಲ್ಲಿ ತಿಳಿಸಿದ್ದಾರೆ.
ಇನ್ನು ಕಳೆದ ವರ್ಷದ ನಡೆದ ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿ ಸೋಲುಕಂಡಿದ್ದರು. ಆಗ ನಿಖಿಲ್ ತಮ್ಮ ಬಳಿ 77 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿಕೊಂಡಿದ್ದರು. ಆದ್ರೆ, ಇದೀಗ ಚನ್ನಪಟ್ಟಣ ಉಪಚುನಾವಣೆ ವೇಳೆ 113 ಕೋಟಿ ರೂ. ಆಸ್ತಿ ಇದೆ ಎಂದು ತೋರಿಸಿದ್ದಾರೆ. ಈ ಮೂಲಕ ಒಂದೇ ವರ್ಷದಲ್ಲಿ ನಿಖ್ ಆಸ್ತಿ ಬರೋಬ್ಬರಿ 36 ಕೋಟಿ ರೂ. ಏರಿಕೆಯಾಗಿದೆ.
ಇನ್ನು ಆಗ ನಿಖಿಲ್ 38.94 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದರು. ಈಗ ಆ ಸಾಲ 70.44 ಕೋಟಿ ರೂಪಾಯಿಗೆ ಏರಿಕೆಯಾಗಿದೆ