ವಿಟ್ಲ: ಕಸಬಾ ಗ್ರಾಮದ ಕಡಂಬು ಅನಿಲಕಟ್ಟೆ ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ.
ದಿನದಿಂದ ದಿನಕ್ಕೆ ವಾತಾವರಣದಲ್ಲಿ ಬಿಸಿಲಿನ ಬೇಗೆ ಹೆಚ್ಚುತ್ತಿರುವ ಕಾರಣದಿಂದ ಶಾರ್ಟ್‌ಸರ್ಕ್ಯೂಟ್ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳೀಯರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಬೆಂಕಿ ಆರಿಸುವಲ್ಲಿ ನಿರತರಾಗಿದ್ದು, ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚುತ್ತಿದ್ದಂತೆ ಸ್ಥಳಿಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕೆ ಬಂದಿದ್ದು, ಬೆಂಕಿಯನ್ನು ಆರಿಸುವ ಕಾರ್ಯ ಮುಂದುವರಿಸಿದ್ದಾರೆ.