ಬೆಂಗಳೂರು: ಕರ್ನಾಟಕದಲ್ಲಿ ಅನರ್ಹ ರೇಷನ್ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಲಕ್ಷಾಂತರ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದು ಮಾಡಲಾಗುತ್ತಿದೆ. ಈ ಬೆನ್ನಲ್ಲೆ ನಮ್ಮ ಮನೆಗಳ ಬಿಪಿಎಲ್ ಕಾರ್ಡ್ ಅರ್ಹವೋ ಅಥವಾ ಅನರ್ಹವೋ ಎಂಬ ಚರ್ಚೆ ಜೋರಾಗಿದೆ.
ಬಿಪಿಎಲ್ ಹಾಗೂ ಅಂತ್ಯೋದ್ಯಯ ಕಾರ್ಡ್ ಪಡೆಯಲು ರಾಜ್ಯ ಸರ್ಕಾರವು ನಿಗದಿತ ಮಾನದಂಡವನ್ನು ರೂಪಿಸಿದೆ. ಆ ನಿಯಮಗಳನ್ನು ಉಲ್ಲಂಘಿಸಿದ್ದರೆ ಅಂತಹವರ ಕಾರ್ಡ್‌ಗಳನ್ನು ಪತ್ತೆ ಮಾಡಿ ಅನರ್ಹ ಎಂದು ಪರಿಗಣಿಸಿ ಆಹಾರ ಇಲಾಖೆ ಅಧಿಕಾರಿಗಳು ರದ್ದು ಮಾಡುತ್ತಿದ್ದಾರೆ.
- ನಿಮ್ಮ ಕುಟುಂಬದಲ್ಲಿ ಯಾರಾದರು ಸರ್ಕಾರಿ ನೌಕರರು ಇದ್ದರೆ ಅನರ್ಹ.
- ಸಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ನೌಕರರು ಇದ್ದರೆ ಅನರ್ಹ.
- ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿ ಮಾಡುತ್ತಿದ್ದರೆ ಅನರ್ಹ.
- ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅನರ್ಹ.
- ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಅನರ್ಹ.
- ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಅನರ್ಹ.
- ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅನರ್ಹ.
ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಆ ಕುಟುಂಬಕ್ಕೆ ಎಪಿಎಲ್ ಯೋಜನೆಯಡಿ ಕಾರ್ಡ್ ನೀಡಲು ಅಗತ್ಯ ಕ್ರಮಕೈಗೊಳ್ಳುತ್ತಾರೆ. ಈ ಬಗ್ಗೆ ಸ್ವತಂ ಆಹಾರ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ. ” ರೇಷನ್ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅರ್ಹರು ಅಲ್ಲದೇ ಇರೋರನ್ನು ಎಪಿಎಲ್ ಮಾಡಿದ್ದೇವೆ. ಎಪಿಎಲ್ಗೆ ಅರ್ಜಿ ಹಾಕಿದವರನ್ನು ರದ್ದು ಮಾಡುವುದಿಲ್ಲ ” ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಅಕ್ರಮವಾಗಿ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವವರಿಗೆ ಅಥವಾ ಅನರ್ಹರಿಗೆ ಕಾರ್ಡ್‌ಗಳನ್ನು ಹಿಂದಿರುಗಿಸಲು ಅವಕಾಶ ನೀಡಲಾಗಿದೆ. ಕಾರ್ಡ್ ದಾರರು ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಹಶೀಲ್ದಾರ್ ಕಚೇರಿನಿ ನೀಡಿ ಅಲ್ಲಿ ಕಾರ್ಡ್ ರದ್ದು ಮಾಡಿಸಿಕೊಳ್ಳಬಹುದು.
ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವವರು ಅನ್ನಭಾಗ್ಯ ಗ್ಯಾರಂಟಿ ಯೋಜನೆಯಡಿ ಅಕ್ಕಿಯನ್ನು ಪಡೆದುಕೊಂಡಿದ್ದದ್ದರೆ ಅವರಿಗೆ ದಂಡ ಹಾಕಲಾಗುತ್ತದೆ. ಪ್ರತಿ ಕೆಜಿ ಅಕ್ಕಿಗೆ 33 ರೂಪಾಯಿಗಳಂತೆ ದಂಡ ವಿಧಿಸಲಾಗುತ್ತದೆ. ದಂಡ ಪಾವತಿಗೆ ನಿರಾಕರಿಸಿದರೆ ಕಾನೂನು ಕ್ರಮಕ್ಕೆ ಮುಂದಾಗಲಾಗುತ್ತದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.