ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಮತ್ತು ಬಿಜೆಪಿ, ಜೆಡಿಎಸ್ ಶಾಸಕರಿಗೆ 10 ರಿಂದ 15 ಕೋಟಿ ರೂ. ನೀಡುವ ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಮೆಟ್ರೋ ರೈಲು ಯೋಜನೆಯನ್ನು ತುಮಕೂರಿಗೆ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ.ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ನೀಡುವ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರಿಗೂ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮಾಡುವುದಕ್ಕೆ ಅನುಕೂಲ ಆಗುವಂತೆ ತಲಾ 25 ಕೋಟಿ ರೂ. ಅನುದಾನವನ್ನು ನೀಡುವುದಾಗಿ ಸಿಎಂಸಿದ್ದರಾಮಯ್ಯಅವರುಭರವಸೆ ನೀಡಿದ್ದಾರೆ. ಜೊತೆಗೆ, ವಿಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂ.ಗಳಿಂದ 15 ಕೋಟಿ ರೂ.ವರೆಗೆ ಅನುದಾನ ಕೊಡಲಿದ್ದಾರೆ ಎಂದು ತಿಳಿಸಿದರು.
ಇನ್ನು ಈ ಹಿಂದಿನ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಕೇವಲ 10 ಕೋಟಿ ರೂ. ಅನುದಾನವನ್ನು ನೀಡುತ್ತಿದ್ದರು. ಆದರೆ, ತಮ್ಮ ಪಕ್ಷದ ಶಾಸಕರಿಗೆ ಮಾತ್ರ ಬರೋಬ್ಬರಿ ತಲಾ 50 ಕೋಟಿ ರೂ. ಅನುದಾನ ನೀಡಿದ್ದರು. ಆದರೆ, ಇದೀಗ ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿ,ಶಂಕುಸ್ಥಾಪನೆಗಳಿವೆ.ಹಲವುಯೋಜನೆಳ ಫಲಾನುಭವಿಗಳಿದ್ದಾರೆ. ಎಲ್ಲಕ್ಷೇತ್ರಗಳಅಭಿವೃದ್ಧಿಯಾದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಅನುದಾನವನ್ನು ಹಂಚಿಕೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳ ಅಭಿವೃದ್ಧಿಯಾದರೆರಾಜ್ಯಅಭಿವೃದ್ಧಿಯಾಗುತ್ತದೆ ಎಂಬುದು ನಮ್ಮ ದೂರದೃಷ್ಟಿಯಾಗಿದೆ. ಆದರೆ, ವಿಪಕ್ಷಗಳ ಶಾಸಕರು ತುಮಕೂರಿಗೆ ಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಭಾವುಟ ತೋರಿಸಲು ಮುಂದಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುವವರಿಗೆ ಇದರ ಅಗತ್ಯವಿಲ್ಲ ಎಂದು ಹೇಳಿದರು