ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೋರ್ಟ್ ಗೆ ಹಾಜರಾಗಿದ್ದಾರೆ.
ವಾರೆಂಟ್ ಜಾರಿ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ ಹೊರ ಬಂದು ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ.
ಚೈತ್ರಾ , ಶ್ರೀಕಾಂತ್ ಸೇರಿದಂತೆ ಒಟ್ಟು ಮೂವರು ಕೋರ್ಟ್ ಗೆ ಹಾಜರಾಗಿದ್ದಾರೆ.
ಬಿಗ್ ಬಾಸ್ ಮನೆಯಿಂದ ನೇರವಾಗಿ ಬೆಂಗಳೂರಿನ ಕೋರ್ಟ್ ಗೆ ಹಾಜರಾಗಿದ್ದಾರೆ.ಉದ್ಯಮಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಗೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ರಿಲೀಸ್ ಆದ ಬಳಿಕ ಚೈತ್ರಾ ಕುಂದಾಪುರ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಪ್ರವೇಶಿಸಿದ್ದರು.
ನಾನು ಹಿಂದೂ ಸಂಘಟನೆಯಲ್ಲಿರುವುದರಿಂದ BJP, RSS ವರಿಷ್ಠರಿಗೂ ಹತ್ತಿರವಿದ್ದೇನೆ. ಪ್ರಧಾನಿ ಕಚೇರಿಯಲ್ಲೂ ಪ್ರಭಾವಿಯಾಗಿದ್ದು, ಸುಪ್ರೀಂ ಕೋರ್ಟ್ ಜಡ್ಜ್ಗಳಿಗೂ ಆಪ್ತಳಾಗಿದ್ದೇನೆ. ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸುತ್ತೇನೆ ಎಂದು ಉದ್ಯಮಿಯೋರ್ವರಿಗೆ ಚೈತ್ರಾ ನಂಬಿಸಿ ಕೋಟ್ಯಾಂತರ ರೂ.ಹಣ ವಂಚಿಸಿದ್ದಳು ಎಂಬ ಆರೋಪವಿದೆ.