ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.
ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು.
ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
























