ಕರ್ನಾಟಕ ನಿವೃತ್ತ ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ.
ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಯವರು ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ರೈ ಯವರು ನಿವೃತ್ತ ಸರಕಾರಿ ನೌಕರರನ್ನು ಉದ್ದೇಶಿಸಿ ನಿಮ್ಮ ಬೇಡಿಕೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಹಾಗೂ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಬಾಕ್ಸ್ : ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಂದ ನಿವೃತ್ತ ನೌಕರರು ಸೇರಿ ಪ್ರತಿಭಟನೆ ನಡೆಸುತ್ತಿದ್ದೇವೆ. ಯಾರೂ ನಮ್ಮ ಬಳಿ ಬಂದು ವಿಚಾರಿಸಿಲ್ಲ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನಮ್ಮ ಬಳಿ ಬಂದು ನಮ್ಮ ಮನವಿ ಸ್ವೀಕರಿಸಿ ಸನ್ಮಾನ್ಯ ಮುಖ್ಯಮಂತ್ರಿಗಳ ಬಳಿ ಇದರ ಬಗ್ಗೆ ಮಾತಾಡುತ್ತೇನೆ ಹಾಗೂ ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಸದಸ್ಯರು
ಕರ್ನಾಟಕ ನಿವೃತ್ತ ನೌಕರರ ವೇದಿಕೆ.