ನವದೆಹಲಿ: ಹಿಂದೂ ಧರ್ಮದ ಶತಮಾನದ ಪವಿತ್ರ ಧಾರ್ಮಿಕ ಕಾರ್ಯಕ್ರಮ ಪ್ರಯಾಗ್ ರಾಜ್ ದ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆ ದಿನವಾದ ಇಂದು ದುರಂತ ನಡೆದುಹೋಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಸೇರಿದ್ದರಿಂದ ಉಂಟಾದ ಕಾಲ್ತುಳಿತಕ್ಕೆ ಸಿಕ್ಕಿ 15 ಮಂದಿ ಮೃತಪಟ್ಟಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಇಂದು ಕಾಲ್ತುಳಿತ ಸಂಭವಿಸಿದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್, ಮಹಾ ಕುಂಭ ನಿರ್ವಹಣೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಥರಿಗಿಂತ ಉತ್ತಮ ಆಡಳಿತಗಾರರಿಗೆ ವಹಿಸಬೇಕು. ಅಲ್ಲಿಗೆ ವಿವಿಐಪಿಗಳ ಸಂಚಾರವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.
ಮೌನಿ ಅಮಾವಾಸ್ಯೆಯಂದು ಲಕ್ಷಾಂತರ ಯಾತ್ರಿಕರು ಪವಿತ್ರ ಸ್ನಾನಕ್ಕಾಗಿ ಬಂದಿದ್ದರಿಂದ ಮಹಾ ಕುಂಭದ ಮಧ್ಯೆ ಸಂಗಮದಲ್ಲಿ ಕಾಲ್ತುಳಿತ ಉಂಟಾಗಿ ಸಾವುನೋವು ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ, ಸಂಗಮ ಮತ್ತು ಮೇಳ ಪ್ರದೇಶದ ಇತರ ಘಾಟ್‌ಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸ್ನಾನ ಮಾಡುತ್ತಲೇ ಇದ್ದರು, ಇಂದು ಮೌನಿ ಅಮಾವಾಸ್ಯೆಯಂದು ಮತ್ತಷ್ಟು ಸಂಖ್ಯೆಯಲ್ಲಿ ಭಕ್ತರು ಸೇರಿದ್ದು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಮಹಾ ಕುಂಭದ ಸಮಯದಲ್ಲಿ ತೀರ್ಥರಾಜ ಸಂಗಮದ ದಡದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದು, ಅನೇಕ ಜನರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ಬೇಸರವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಮ್ಮ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಬಯಸುತ್ತೇವೆ ಎಂದರು.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು(ಜನವರಿ 29) ಕಾಲ್ತುಳಿತ ಸಂಭವಿಸಿದ್ದು, ಇನ್ನು ಈ ಕಾಲ್ತುಳಿತದಲ್ಲಿ ಕಾಣೆಯಾಗಿದ್ದ ಬೆಳಗಾವಿಯ ಇಬ್ಬರು ತಾಯಿ-ಮಗಳು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.
ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ.
























