• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

February 12, 2025
‘ಮನೆಮನೆಗೆ ಪೊಲೀಸ್​’ ಅಪರಾಧ ಕೃತ್ಯ ಭೇದಿಸಲು ಹೊರ ರಾಜ್ಯಗಳ ಪೊಲೀಸ್!

‘ಮನೆಮನೆಗೆ ಪೊಲೀಸ್​’ ಅಪರಾಧ ಕೃತ್ಯ ಭೇದಿಸಲು ಹೊರ ರಾಜ್ಯಗಳ ಪೊಲೀಸ್!

July 30, 2025
ಭಯೋತ್ಪಾದಕ ಸಂಘಟನೆಯೊಂದಿಗೆ ಬೆಂಬಲ ಆನ್​ಲೈನ್​ನಲ್ಲಿ ಜಿಹಾದಿ ಕೃತ್ಯ ಆರೋಪದಡಿ ಶಮಾ ಪರ್ವೀನ್ ಬಂಧನ

ಭಯೋತ್ಪಾದಕ ಸಂಘಟನೆಯೊಂದಿಗೆ ಬೆಂಬಲ ಆನ್​ಲೈನ್​ನಲ್ಲಿ ಜಿಹಾದಿ ಕೃತ್ಯ ಆರೋಪದಡಿ ಶಮಾ ಪರ್ವೀನ್ ಬಂಧನ

July 30, 2025
ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ  ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

July 30, 2025
ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

July 30, 2025
ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

July 30, 2025
ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

July 30, 2025
ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

July 30, 2025
ಹಿಂದೂವಾಗಿ, ದಲಿತೆಯಾಗಿ ಜನಿಸಿದ್ದೇನೆ ಧರ್ಮಕ್ಕಾಗಿ ಕೇಸರಿ ಶಾಲು ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ

ಹಿಂದೂವಾಗಿ, ದಲಿತೆಯಾಗಿ ಜನಿಸಿದ್ದೇನೆ ಧರ್ಮಕ್ಕಾಗಿ ಕೇಸರಿ ಶಾಲು ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ

July 30, 2025
ಸಮಾಜದಲ್ಲಿರುವ ದುಷ್ಟ ಕಣ್ಣುಗಳಿಂದ ಮಗಳನ್ನು ರಕ್ಷಣೆ ಮಾಡಬೇಕಿರುವ ತಂದೆಯಿಂದ ಲೈಂಗಿಕ ದೌರ್ಜನ್ಯ

ಸಮಾಜದಲ್ಲಿರುವ ದುಷ್ಟ ಕಣ್ಣುಗಳಿಂದ ಮಗಳನ್ನು ರಕ್ಷಣೆ ಮಾಡಬೇಕಿರುವ ತಂದೆಯಿಂದ ಲೈಂಗಿಕ ದೌರ್ಜನ್ಯ

July 29, 2025
ಪುತ್ತೂರಿನ ನೆಹರುನಗರ ಶ್ರೀಸಾಯಿ ವೆಲ್ಲಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ.

ಪುತ್ತೂರಿನ ನೆಹರುನಗರ ಶ್ರೀಸಾಯಿ ವೆಲ್ಲಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ.

July 29, 2025
ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

July 29, 2025
ಪಹಲ್ಗಾಮ್ ದಾಳಿಯ ಮಾಸ್ಟರ್​​ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ

ಪಹಲ್ಗಾಮ್ ದಾಳಿಯ ಮಾಸ್ಟರ್​​ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ

July 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 30, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ  ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

    ಶವ ಹೂತಿಟ್ಟ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ

    ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಸಾರ್ವಜನಿಕ ಸಮಿತಿ ವತಿಯಿಂದ ನಡೆಯುವ 46 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

    ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

    ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

    ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

    ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

    ಜಗದೊಡೆಯ ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ತುಪ್ಪ ದೀಪ ಸೇವೆ ಆರಂಭ

    ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ -ನಳಿನ್ ಕುಮಾರ್ ಕಟೀಲ್

    ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ -ನಳಿನ್ ಕುಮಾರ್ ಕಟೀಲ್

    ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನರಿಮೊಗ್ರು ಮತ್ತು ಶಾಂತಿಗೋಡು ಶಕ್ತಿಕೇಂದ್ರದ ಪದಾಧಿಕಾರಿಗಳ ಹಾಗೂ ಪ್ರಮುಖರ ಪ್ರಶಿಕ್ಷಣ ವರ್ಗ

    ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನರಿಮೊಗ್ರು ಮತ್ತು ಶಾಂತಿಗೋಡು ಶಕ್ತಿಕೇಂದ್ರದ ಪದಾಧಿಕಾರಿಗಳ ಹಾಗೂ ಪ್ರಮುಖರ ಪ್ರಶಿಕ್ಷಣ ವರ್ಗ

    ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಕೆದಂಬಾಡಿ ಶಕ್ತಿ  ಕೇಂದ್ರದಲ್ಲಿ ಅಭ್ಯಾಸವರ್ಗ

    ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಕೆದಂಬಾಡಿ ಶಕ್ತಿ ಕೇಂದ್ರದಲ್ಲಿ ಅಭ್ಯಾಸವರ್ಗ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

by ಪ್ರಜಾಧ್ವನಿ ನ್ಯೂಸ್
February 12, 2025
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.
32
SHARES
90
VIEWS
ShareShareShare

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರರು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ ಎಂದು ಹೇಳಿದೆ.

ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ, ಮತ್ತು ಭಾರತ ಸಂವಿಧಾನದ 213 (1)ನೇ ಅನುಚ್ಛೇದದ ಮೇರೆಗಿನ ಅಧಿಕಾರಗಳನ್ನು ಚಲಾಯಿಸಲು ಅವಶ್ಯಕ ಮತ್ತು ಯುಕ್ತವಾದ ಸನ್ನಿವೇಶಗಳು ಉದ್ಭವವಾಗಿವೆಯೆಂದು ಮಾನ್ಯ ಕರ್ನಾಟಕ ರಾಜ್ಯಪಾಲರು ಮನಗಂಡಿರುವುದರಿಂದ, ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸುವರು

ಎಂದರೆ :-
1. ಸಂಕ್ಷಿಪ್ತ ಹೆಸರು, ಪ್ರಾರಂಭ ಮತ್ತು ಅನ್ವಯ.- (1) ಈ ಅಧ್ಯಾದೇಶವನ್ನು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.
(3) ಈ ಅಧ್ಯಾದೇಶದಲ್ಲಿ ಇರುವುದಾವುದೂ ಆರ್‌ಬಿಐನೊಂದಿಗೆ ನೋಂದಾಯಿಸಲಾದ ಯಾವುದೇ ಬ್ಯಾಂಕಿಂಗ್‌ ಅಥವಾ ಬ್ಯಾಂಕಿಂಗೇತರ ಹಣಕಾಸು ಕಂಪನಿಗೆ ಅನ್ವಯಿಸತಕ್ಕದ್ದಲ್ಲ.
(NBFC)
(4) ಈ ಅಧ್ಯಾದೇಶದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಅಸ್ತಿತ್ವದಲ್ಲಿನ ಯಾವುದೇ ಕಾನೂನಿನೊಂದಿಗೆ ಮುಂದುವರೆಯತಕ್ಕದು ಮತ್ತು ಅಧ್ಯಾರೋಹಿಯಾಗಿರತಕ್ಕದ್ದಲ್ಲ.
2. ಪರಿಭಾಷೆಗಳು. (1) ಈ ಅಧ್ಯಾದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಸಾಲಗಾರ” ಎಂದರೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ಮೌಖಿಕ ಅಥವಾ ಲಿಖಿತ ಕರಾರಿನಡಿ ಷರತ್ತುಗಳು ಮತ್ತು ನಿಬಂಧನೆಗಳೊಂದಿಗೆ, ಯಾವುದೇ ಉದ್ದೇಶಕ್ಕಾಗಿ ಸಾಲದ ರೂಪದಲ್ಲಿ ಹಣವನ್ನು ಪಡೆಯುವ, ಆ ಹಣವನ್ನು ಕೆಲವು ಕಾಲಾವಧಿಯೊಳಗೆ ಮರುಪಾವತಿಸತಕ್ಕ ವ್ಯಕ್ತಿ ಅಥವಾ ಸ್ವಸಹಾಯ ಗುಂಪು (SHG) ಅಥವಾ ಜಂಟಿ ಹೊಣೆಗಾರಿಕೆ ಗುಂಪು (JLG) ಅಥವಾ ವ್ಯಕ್ತಿಗಳ ಗುಂಪು:
(ಬಿ) “ಬಲವಂತದ ಕ್ರಮ” ಎಂದರೆ 8ನೇ ಪ್ರಕರಣದಲ್ಲಿ ವಿವರಿಸಲಾದ ಬಲವಂತದ ಕ್ರಮ; (ಸಿ) “ಬಡ್ಡಿ” ಎಂಬುದು ಈ ಅಧ್ಯಾದೇಶದ ಉಪಬಂಧಗಳಡಿ ಪರಿಭಾಷಿಸಿದ ನಿಬಂಧನೆಗಳ ಉದ್ದೇಶಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ನಗದು ಅಥವಾ ಸಂದರ್ಭಾನುಸಾರವಾಗಿ ವಸ್ತುರೂಪದಲ್ಲಿ ಸಾಲಗಾರನಿಗೆ ನೀಡಿದ ಮೊತ್ತದ ಮೇಲಿನ ಲಾಭ ಹಾಗೂ ಅದು ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ವಿಧಿಸಲಾದ ಬಡ್ಡಿಯನ್ನು ಒಳಗೊಳ್ಳುವುದು

HPR Institute Of Nursing And Paramedical Sciences & Friends Beke

ಜಾಹೀರಾತು

DHKSHIN 8792898692

ಜಾಹೀರಾತು

(ಡಿ) “ಸಾಲ” ಎಂದರೆ ಸಾಲಗಾರನಿಗೆ ಬಡ್ಡಿಯ ಮೇರೆಗೆ ಖಚಿತವಾಗಿ ಅಥವಾ ಅನ್ಯಥಾ ನೀಡಲಾದ ಹಣದ ರೂಪದಲ್ಲಿನ ಅಥವಾ ಬೀಜ, ಗೊಬ್ಬರ, ಇತ್ಯಾದಿಗಳಂತಹ ವಸ್ತುರೂಪದಲ್ಲಿನ ಮುಂಗಡ ಅಥವಾ ಕೈಸಾಲ;
(ಇ) “ಲೇವಾದೇವಿದಾರ” ಎಂಬುದು ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆಗಳನ್ನು ಒಳಗೊಳ್ಳುವುದು ಹಾಗೂ ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ಬಡ್ಡಿಯನ್ನು ವಿಧಿಸುವ ಮೂಲಕ ಲಾಭವನ್ನು ಗಳಿಸಲು ನಗದು ಅಥವಾ ವಸ್ತುರೂಪದಲ್ಲಿ ಸಾಲ ನೀಡುವ ಅಥವಾ ಯಾವುದೇ ಸ್ವರೂಪದ ಹಣ ಕಾಸು ನೆರವು ನೀಡುವುದನ್ನು ಪ್ರಧಾನ ಅಥವಾ ಪ್ರಾಸಂಗಿಕ ಚಟುವಟಿಕೆಯಾಗಿಸಿಕೊಂಡ ಯಾವುದೇ ಪಾಲುದಾರ ಫರ್ಮು ಅಥವಾ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಅಥವಾ ಡಿಜಿಟಲ್ ಸಾಲನೀಡಿಕೆ ಪ್ಲಾಟ್‌ಫಾರ್ಮ್;
(ಎಫ್) “ನೋಂದಣಿ ಪ್ರಾಧಿಕಾರಿ” ಎಂದರೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿ: ಪರಂತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಂಥ ಇತರ ಗೊತ್ತುಪಡಿಸಿದ ಅಧಿಕಾರಿಯನ್ನು ನೋಂದಣಿ ಪ್ರಾಧಿಕಾರಿ ಎಂದು ನೇಮಿಸಬಹುದು;
(ಜಿ) “ಸಮಾಜದ ದುರ್ಬಲ ವರ್ಗ” ಎಂದರೆ ರೈತರು, ಮಹಿಳೆಯರು, ಮಹಿಳಾ ಸ್ವಸಹಾಯ ಗುಂಪುಗಳು, ಕೃಷಿ ಕಾರ್ಮಿಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಚಲಿಸುವ ಇತರ ವ್ಯಾಪಾರಿಗಳು, ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಅವರ ಮೂಲ ಸೇವೆಗಳಿಗೆ ಕುಗ್ಗಿರುವ ಪ್ರವೇಶಾವಕಾಶದ ಮತ್ತು ಮುಖ್ಯವಾಗಿ ಆರೋಗ್ಯ, ವಸತಿ ನೈರ್ಮಲ್ಯ ಇತ್ಯಾದಿಗಳ ಅಂತರ್ನಿಹಿತ ನಿರ್ಣಾಯಕತೆಗಳ (underlying determinants) ಕಾರಣದಿಂದಾಗಿ ಇತರರಿಗೆ ಹೋಲಿಸಿದಲ್ಲಿ ಅನನುಕೂಲತೆಯಿರುವ ಜನರ ಗುಂಪು ಮತ್ತು ಆರ್ಥಿಕವಾಗಿ ಹಿಂದುಳಿದ, ನಿಯತ ಆದಾಯದ ಮೂಲವಿಲ್ಲದೆ ಜೀವನೋಪಾಯದ ಮಾದರಿಗಳಲ್ಲಿ ಕೆಳಮಟ್ಟದಲ್ಲಿರುವವರು.
2) ಈ ಅಧ್ಯಾದೇಶದಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಪದಗಳು, ಸಂಬಂಧಪಟ್ಟ ಅಧಿನಿಯಮಗಳು ಮತ್ತು ಅದರಡಿ ರಚಿಸಿದ ನಿಯಮಗಳಲ್ಲಿ ಅನುಕ್ರಮವಾಗಿ ಅವುಗಳಿಗೆ ನೀಡಲಾದ ಅವೇ ಅರ್ಥಗಳನ್ನು ಹೊಂದಿರತಕ್ಕದ್ದು.
3. ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರ ನೋಂದಣಿ.- (1) ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಂದು ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಅವುಗಳು ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಗ್ರಾಮಗಳು ಅಥವಾ ಪಟ್ಟಣಗಳು, ವಿಧಿಸಿರುವ ಅಥವಾ ವಿಧಿಸಲು ಉದ್ದೇಶಿಸಿರುವ ಬಡ್ಡಿಯ ದರ, ಯುಕ್ತ ಜಾಗರೂಕ ನಿರ್ವಹಣಾ ವ್ಯವಸ್ಥೆ ಮತ್ತು ವಸೂಲಾತಿಯನ್ನು ಜಾರಿಗೊಳಿಸುವ ವ್ಯವಸ್ಥೆ ಹಾಗೂ ಸಾಲ ನೀಡಿಕೆ ಎಂಬುದಾಗಿ ತಿಳಿಸಿದೆ. ಆ ಇತರೆ ಅಂಶಗಳ ಬಗ್ಗೆ ಈ ಕೆಳಗಿನ ಕರ್ನಾಟಕ ರಾಜ್ಯ ಪತ್ರದಲ್ಲಿ ಸಂಪೂರ್ಣ ಮಾಹಿತಿ ಇದೆ. ಓದಿ ತಿಳಿದು ಕೊಳ್ಳಬಹುದಾಗಿದೆ.

Hotel Tulunad

ಜಾಹೀರಾತು

SendShare13Share
Previous Post

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

Next Post

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..