• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

February 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ರೋಗಿಯ ಹೊಟ್ಟೆಯಲ್ಲಿ ಶಸ್ತ್ರಚಿಕಿತ್ಸಾ ಬಟ್ಟೆಯನ್ನು ಬಿಟ್ಟುಬಿಟ್ಟ ಘಟನೆ ನಡೆದಿದೆ. ಇದರಿಂದ ಬಾಣಂತಿ ಸುಮಾರು 20 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿದ್ದಾರೆ. ನಂತರ ಮತ್ತೊಂದು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಬಟ್ಟೆಯನ್ನು ತೆಗೆಯಲಾಗಿದೆ. ಸದ್ಯ, ಬಾಣಂತಿಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

by ಪ್ರಜಾಧ್ವನಿ ನ್ಯೂಸ್
February 24, 2025
in ಕ್ರೈಮ್, ಪುತ್ತೂರು
0
ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು! : ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು
218
SHARES
622
VIEWS
ShareShareShare

ಪುತ್ತೂರು: ಸಿಸೇರಿಯನ್ ಮಾಡುವ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಳಿದ ಹಾಗೂ ಈ ವಿಚಾರ ತಿಳಿದ ಬಳಿಕವೂ ವೈದ್ಯರು ಹೊರ ತೆಗೆಯದೇ ಇರುವುದರಿಂದ ಸೋಂಕಿಗೆ ಒಳಗಾಗಿ ಬ್ಯಾಕ್ಟೀರಿಯಾ ದೇಹದ ವಿವಿಧ ಭಾಗಕ್ಕೆ ಹರಡಿದ ಪರಿಣಾಮ ಪತ್ನಿಯ ಆರೋಗ್ಯ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿತ್ತು. ಇಂತಹ ಸ್ಥಿತಿ ಇನ್ನು ಮುಂದೆ ಯಾರಿಗೂ ಬರಬಾರದು ಎಂದು ಈ ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಸಂಬಂಧಿಸಿದವರಿಗೆ ದೂರು ನೀಡಲಾಗಿದೆ ಎಂದು ಮಹಿಳೆಯ ಪತಿ, ಬಂಗಾರಡ್ಕ ನಿವಾಸಿ ಗಗನ್‌ದೀಪ್ ಬಿ. ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಪತ್ನಿಗೆ 33 ವರ್ಷ ಪ್ರಾಯವಾಗಿದ್ದು ಹೆರಿಗೆಗಾಗಿ 2024ರ ನ.27ರಂದು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಪತ್ನಿಗೆ ಸಿಸೇರಿಯನ್ ಮೂಲಕ ಹೆರಿಗೆಯಾಗಿದ್ದು, ಡಿ.2ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದರು. ಇದಾಗ ಬಳಿಕ ಆಕೆಗೆ ವಿಪರೀತ ಜ್ವರ ಬಂದಿದ್ದು, ಹೆರಿಗೆ ಮಾಡಿಸಿದ್ದ ಡಾ. ಅನಿಲ್ ಅವರಲ್ಲಿ ಈ ಬಗ್ಗೆ ವಿಚಾರಿಸಿದಾಗ ಜ್ವರದ ಔಷಧಿ ಬಳಸುವಂತೆ ಸೂಚಿಸಿದ್ದಾರೆ. ಹೊಟ್ಟೆಯ ಎಡ ಭಾಗ ಜಗ್ಗಿದ್ದು, ಬಲ ಭಾಗದಲ್ಲಿ ಕೈಗೆ ಏನೋ ಸಿಕ್ಕಿದ ಅನುಭವ ಪತ್ನಿಗೆ ಆಗುತ್ತಿತ್ತು.

ಜಾಹೀರಾತು

ಎರಡು ದಿನದಲ್ಲಿ ಜ್ವರ ಕಡಿಮೆಯಾಗದೇ ಇದ್ದ ಹಿನ್ನೆಲೆಯಲ್ಲಿ ಮತ್ತೆ ವಿಚಾರಿಸಿದಾಗ ವೈದ್ಯರು ಹೆಮಟೋಮ್ ಆಗಿರಬಹುದೆಂದು ಹೇಳಿದ್ದಲ್ಲದೆ ಈ ಬಗ್ಗೆ ಹೆಚ್ಚಿನ ಚಿಂತೆ ಬೇಡ ಎಂದಿದ್ದಾರೆ. ಮತ್ತೆ ಮತ್ತೆ ಕೇಳಿದಾಗ ಆಲ್ಟ್ರಾ ಸೌಂಡ್ ಮಾಡಬಹುದೆಂದು ಹೇಳಿದ್ದರು. ಇದರಲ್ಲಿ 10 ಸೆ.ಮೀ. ಮಾಪ್ ಫಾರ್ಮೇಶನ್ ಇರುವುದು ಈ ವೇಳೆ ಕಂಡು ಬಂದಿದೆ. ಬಳಿಕ ಬೇರೆ ಔಷಧಿಯನ್ನು ನೀಡಿದ್ದು, ಜ್ವರ ಕಡಿಮೆಯಾಗಿತ್ತು. ಆದರೆ ಕೆಲವೇ ದಿನದಲ್ಲಿ ಪತ್ನಿಗೆ ಸಂಧಿ ನೋವು ಪ್ರಾರಂಭವಾಗಿದ್ದು, ಈ ಬಗ್ಗೆ ವೈದ್ಯರಲ್ಲಿ ವಿಚಾರಿಸಿದಾಗ ಆರ್ಥೋ ಇರಬಹುದೆಂದು ಹೇಳಿದ್ದರು. ಕೆಲವು ದಿನದ ಬಳಿಕ, ಮಗುವನ್ನು ಹಾಸಿಗೆಯಿಂದ ಎತ್ತಲಾಗದ, ನಿಲ್ಲಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂಬುದನ್ನು ತಿಳಿಸಿದಾಗ, ರುಮೊಟೋಲೋಜಿ ತಜ್ಞರನ್ನು ಸಂಪರ್ಕಿಸುವುದು ಉತ್ತಮ ಎಂಬ ಸಲಹೆ ನೀಡಿದ್ದರು.

ಮಂಗಳೂರಿನ ತಜ್ಞ ವೈದ್ಯರು ಈ ಕುರಿತ ವರದಿಗಳನ್ನು ಪರಿಶೀಲನೆ ನಡೆಸಿ ಸಿಸೇರಿಯನ್ ಮಾಡಿದ ವೈದ್ಯರಲ್ಲಿ ಮಾತನಾಡಿದ್ದಾರೆ. ಈ ಸಂದರ್ಭ 10 ಸೆ.ಮೀ. ಮಾಸ್ ತೋರಿಸುತ್ತಿದ್ದರೂ ಯಾಕೆ ತೆರವು ಮಾಡಿಲ್ಲ ಎಂದು ಕೇಳಿದ್ದು, ಪಾರಿನ್ ಬಾಡಿ ಆಗಿರಲಿಕ್ಕಿಲ್ಲ ಎಂದು ತಿಳಿಸಿದ್ದಾರೆ. ಸಿಟಿ ಸ್ಕ್ಯಾನ್ ಮಾಡಿದಾಗ ಸರ್ಜಿಕಲ್ ಮಾಪ್ ಅನ್ನು ಸೂಚಿಸುವ ಗ್ಲಾಸಿಪಿಗೋಮಾ ಇದೆಯೆಂಬುದು ಬೆಳಕಿಗೆ ಬಂದಿದ್ದು, ಒಂದೂವರೆ ತಿಂಗಳು ಆಗಿರುವ ಕಾರಣ ಈಗಲೇ ಅಪಾಯದ ಸ್ಥಿತಿ ತಲುಪಿದೆ ಎಂದಿದ್ದಾರೆ.

ದ್ವಿತೀಯ ಅಭಿಪ್ರಾಯ ಪಡೆದು ತಕ್ಷಣ ಅದನ್ನು ಹೊರ ತೆಗೆಯುವ ನಿಟ್ಟಿನಲ್ಲಿ ಶಸಚಿಕಿತ್ಸೆ ನಡೆಸಲಾಗಿದೆ ಎಂದು ಗಗನ್‌ದೀಪ್ ತಿಳಿಸಿದರು. ಈ ಘಟನೆಯಿಂದ ಪತ್ನಿ ಮೂರು ತಿಂಗಳಿಂದ ಮಾನಸಿಕ ಯಾತನೆಯಲ್ಲಿ ದಿನಕಳೆಯುವ ಸ್ಥಿತಿ ನಿರ್ಮಾಣವಾಗಿತ್ತು. ವೈದ್ಯರ ನಿರ್ಲಕ್ಷ್ಯದಿಂದ ಭಾರೀ ಅನಾಹುತ ಆಗಿದೆ ಎಂದು ಆರೋಪಿಸಿದ ಅವರು ಈ ಕುರಿತು ವಿವಿಧ ಕಡೆ ದೂರು ನೀಡಿದ್ದೇವೆ. ಪುತ್ತೂರು ನಗರ ಪೊಲೀಸ್ ಠಾಣೆಗೂ ದೂರು ನೀಡಿದ್ದೇವೆ ಎಂದು ತಿಳಿಸಿದರು. ಅವರ ಸಂಬಂಧಿಕರಾದ ಶಿವಪ್ರಸಾದ್ ಸರಳಿ, ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜ.25ರಂದು ಪುತ್ತೂರು ಧನ್ವಂತರಿ ಆಸ್ಪತ್ರೆಯಲ್ಲಿ ಡಾ. ವಿವೇಕ್ ಕಜೆ ಅವರ ನೇತೃತ್ವದಲ್ಲಿ ಸುಮಾರು 4 ತಾಸಿನ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿ ಬಾಕಿಯಾಗಿದ್ದ ಬಟ್ಟೆಯನ್ನು ತೆರವು ಮಾಡಲಾಗಿದೆ. ಜ್ವರ ಬರುತಿತ್ತು, ಸೋಂಕು ತಗುಲಿದ ಬಗ್ಗೆ ವರದಿಗಳು ಬಂದವು. ಸೋಂಕಿಗೆ ಕಾರಣವಾದ ರೋಗಾಣುಗಳು ರಕ್ತದಲ್ಲಿ ಕಾಣಿಸಿಕೊಂಡಿದ್ದಲ್ಲದೆ, ಲಂಗ್ಸ್ ಸಮಸ್ಯೆ, ಆಕ್ಸಿಜನ್ ಸಮಸ್ಯೆ, ರಕ್ತದ ಸಮಸ್ಯೆ ಸೇರಿ ವಿವಿಧ ಸಮಸ್ಯೆಗಳು ಈ ಸಂದರ್ಭ ಕಾಣಿಸಿಕೊಂಡಿದೆ. ಸಿಟಿ ಸ್ಕ್ಯಾನ್ ಮೂಲಕ, ಸೋಂಕು ತಗಲಿದ್ದಲ್ಲಿ ಕೀವು ತುಂಬಿರುವುದು ತಿಳಿದು ಬಂದಿದ್ದು, ತಕ್ಷಣ ಅದನ್ನು ಆಧುನಿಕ ತಂತ್ರಜ್ಞಾನ ಬಳಸಿ ತೆಗೆಯುವ ಕಾರ್ಯವಾಗಿದೆ. ಬೇಕಾದ ಎಲ್ಲಾ ಚಿಕಿತ್ಸೆಗಳೂ ತ್ವರಿತವಾಗಿ ನಡೆದಿದೆ. ವೈದ್ಯರು ಸಾಕಷ್ಟು ಉತ್ತಮ ಪ್ರಯತ್ನಗಳನ್ನು ಮಾಡಿದ್ದಾರೆ. ಸುಮಾರು 22 ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗಗನ್‌ದೀಪ್ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಬಳಿಕ ಪತ್ನಿ ಚೇತರಿಸುತ್ತಿದ್ದಂತೆ ಈ ವಿಚಾರ ಹೊರ ಪ್ರಪಂಚಕ್ಕೆ ತೆರೆದುಕೊಂಡಿದ್ದು, ಪಿ.ಜಿ. ಪೋರ್ಟಲ್‌ನಲ್ಲಿ ಮೊದಲು ದೂರು ದಾಖಲು ಮಾಡಲಾಗಿದೆ. ಫೆ.22ರಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಫೆ.23ರಂದು ಪುತ್ತೂರು ಸಿಟಿ ಆಸ್ಪತ್ರೆಯ ವೈದ್ಯ ಡಾ. ಅನಿಲ್ ಎಸ್. ಅವರ ಮೇಲೆ ಪುತ್ತೂರು ಪೊಲೀಸ್ ನಿರೀಕ್ಷಕರಿಗೆ ದೂರು ನೀಡಿದ್ದೇವೆ. ಇಂಡಿಯನ್ ಮೆಡಿಕಲ್ ಬೋರ್ಡ್ ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲೂ ದೂರು ದಾಖಲಿಸಲಾಗಿದೆ. ಪತ್ನಿಯ ಆರೈಕೆಗೆ ಜೊತೆಗೆ ಇರಬೇಕಾಗಿದ್ದ ಹಿನ್ನೆಲೆಯಲ್ಲಿ ಖುದ್ದು ಇಲಾಖೆಗಳಿಗೆ ಹೋಗಿ ದೂರು ನೀಡಲು ಸಾಧ್ಯವಾಗದಿರುವುದರಿಂದ ಎಲ್ಲಾ ಕಡೆಗೆ ಇ-ಮೇಲ್ ಹಾಗೂ ಪೋರ್ಟಲ್ ಮೂಲಕ ದೂರು ನೀಡಲಾಗಿದೆ.

SendShare87Share
Previous Post

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಧ್ವಜಾರೋಹಣ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

Next Post

ಮಾಜಿ ಗೆಳತಿ​ಗೆ ಬೇರೊಬ್ಬನ ಜತೆ ಸಂಬಂಧ, ನಾಲ್ವರು ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಮಾಜಿ ಗೆಳತಿ​ಗೆ ಬೇರೊಬ್ಬನ ಜತೆ ಸಂಬಂಧ, ನಾಲ್ವರು ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..