ಬೆಂಗಳೂರು: ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ನಡೆಯುತ್ತಿದೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಡಿಕೆಯನ್ನು ಇಟ್ಟಿದ್ದರು.
ಸತತ ಮುಖ್ಯಮಂತ್ರಿಗಳಿಗೆ ಮತ್ತು ಸರಕಾರಕ್ಕೆ ಒತ್ತಡವನ್ನು ತಂದು ಇಂದು ರಾಜ್ಯ ಬಜೆಟ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುತ್ತೂರಿಗೆ ಹೊಸ ಮೆಡಿಕಲ್ ಕಾಲೇಜಿನನ್ನು ಘೋಷಣೆ ಮಾಡಿದ್ದಾರೆ. ಪುತ್ತೂರಿನ ಜನತೆಯ ಪರವಾಗಿ ಮುಖ್ಯಮಂತ್ರಿಯವರಿಗೆ ಮತ್ತು ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ ಪುತ್ತೂರಿನ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
ಘೋಷಣೆ ಆದ ತಕ್ಷಣ ಪುತ್ತೂರಿನ ಜನತೆಯ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮೆಡಿಕಲ್ ಕಾಲೇಜ್ ಹೋರಾಟಗಾರರೊಂದಿಗೆ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಇಂದು ವಿಧಾನಸೌಧದಲ್ಲಿ ಶಾಸಕರು ಸನ್ಮಾನಿಸಲಿದ್ದಾರೆ.
ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು , ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದ್ಯಕೀಯ ಕಾಲೇಜ್ ಘೋಷಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ಸರಕಾರಿ ವೈದ್ಯಕೀಯ ಕಾಲೇಜಿಗೆ ಪೂರಕವಾಗಿ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಕ್ರಮ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಹೊರತಾಗಿಯೂ ಬಜೆಜ್ನಲ್ಲಿ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್ನಲ್ಲಿ ಪ್ರಮುಖ ಅಂಶಗಳು ಇಲ್ಲಿವೆ.
ಬಜೆಟ್ನ ಮುಖ್ಯಾಂಶಗಳು
- ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
- ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
- ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
- ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದರು.