ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಒಗ್ಗಟ್ಟಾಗಿದ್ದು, ಉಗ್ರವಾದವನ್ನು ನಿರ್ಮೂಲನೆ ಮಾಡದ ಹೊರತು ಭಾರತ ವಿರಮಿಸುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಜಸ್ಥಾನದ ಬಿಕಾನೇರ್‌ನ ದೇಶ್ನೋಕೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಆಪರೇಷನ್ ಸಿಂಧೂರ” ಸೇನಾ ಕಾರ್ಯಾಚರಣೆಯನ್ನು ಯಶಸ್ವಿ ಎಂದು ಬಣ್ಣಿಸಿದರು.
“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು, ಇಂದು ಮಣ್ಣಾಗಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಚರಣೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ)ದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಭಾರತ ವಿರೋಧಿ ಚಟುವಟಿಕೆ ನಡೆಸುವವರಿಗೆ ಉಳಿಗಾಲವಿಲ್ಲ ಎಂಬ ಸಂದೇಶವನ್ನು ರವಾನಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದು ಪ್ರಧಾನಿ ಮೋದಿ ಗುಡುಗಿದರು.