ಬೆಳ್ತಂಗಡಿ: ಪತ್ನಿಯನ್ನು ಇರಿದು ಕೊಲೆ ನಡೆಸಿ ಪತಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ ತೆಕ್ಕಾರು ಎಂಬಲ್ಲಿ ಘಟನೆ ನಡೆದಿದ್ದು, ಝೀನತ್ (40) ಕೊಲೆಗೀಡಾದ ಮಹಿಳೆ ಯಾಗಿದ್ದು, ಪತಿ ರಫೀಕ್ (47) ಎಂಬಾತನ ಕೃತ್ಯ ಎನ್ನಲಾಗಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ ವಿದೇಶದ ಉದ್ಯೋಗ ತ್ಯಜಿಸಿ ತೆಕ್ಕಾರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಮಗ ಮತ್ತು ಮಗಳ ಮುಂದೆಯೇ ಪತ್ನಿಗೆ ಎದೆಗೆ ಚಾಕುವಿನಿಂದ ಕುತ್ತಿ ಕೊಲೆ ಗೈದಿದ್ದು, ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ, ಬೆಳ್ತಂಗಡಿ, ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ವಾಸವಿದ್ದ ಝೀನತ್ (40) ರಫೀಕ್ ನೊಂದಿಗೆ ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುತ್ತಾರೆ. ಸದ್ರಿ ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿರುವುದಾಗಿದೆ. ಜು.17 ರಂದು ಬೆಳಿಗ್ಗೆ ಕೌಟುಂಬಿಕ ಕಲಹ ನಡೆದಾಗ ರಫೀಕ್ ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿರುತ್ತಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.