ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭದ್ರತಾ ವೈಫಲ್ಯಗಳಿಗೆ ಉದಾಹರಣೆಯಾಗಿದೆ ಎಂದು ಆರೋಪಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಭದ್ರತಾ ವೈಫಲ್ಯಕ್ಕೆ ಸ್ವತಃ ತಾವೇ ಹೊಣೆ ಹೊತ್ತಿದ್ದಾರೆ ಎಂಬ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ ಓವೈಸಿ, ‘ಘಟನೆ ನಡೆದು ಸುಮಾರು ಮೂರು ತಿಂಗಳ ನಂತರ ಮನೋಜ್ ಸಿನ್ಹಾ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಅವರು ಕಾರಣರಾಗಿದ್ದರೆ, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು’ ಎಂದು ಓವೈಸಿ ಒತ್ತಾಯಿಸಿದರು.
ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿಕಾರಿದ AIMIM ಅಧ್ಯಕ್ಷ ಒವೈಸಿ, ‘ಪಹಲ್ಗಾಮ್‌ಗೆ ಸೇಡು ತೀರಿಸಿಕೊಳ್ಳಲೇಬೇಕು. ಆಪರೇಷನ್ ಸಿಂಧೂರ್ ಮುಂದುವರಿಸಿ. ಧರ್ಮ ಕೇಳಿ 26 ಭಾರತೀಯರನ್ನು ಕೊಂದ ಆ ನಾಲ್ವರು ಭಯೋತ್ಪಾದಕರನ್ನು ಹಿಡಿಯುವವರೆಗೂ ನಾವು ನಿಮ್ಮನ್ನು ಪ್ರಶ್ನಿಸುತ್ತೇವೆ’ ಎಂದು ಹೇಳಿದರಲ್ಲದೇ, ‘ಪಹಲ್ಗಾಮ್ ದಾಳಿ ಮೋದಿ ಸರ್ಕಾರದ ಭದ್ರತಾ ವೈಫಲ್ಯಕ್ಕೆ ಜೀವಂತ ಉದಾಹರಣೆಯಾಗಿದೆ’ ಎಂದು ಅವರು ಹೇಳಿದರು.