• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

August 15, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

by ಪ್ರಜಾಧ್ವನಿ ನ್ಯೂಸ್
August 15, 2025
in ರಾಜ್ಯ, ಸಾಂಸ್ಕೃತಿಕ
0
ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
11
SHARES
32
VIEWS
ShareShareShare

ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ  ಪ್ರಯುಕ್ತ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನು, ಇಂಟರ್ನೆಟ್ಟು ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ.

ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಇದಕ್ಕಾಗಿ ನಾವು ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಎಂಬ ಹೊಸ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ನಾವು ಕೇವಲ ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ. ಜನರ ಜೀವನವನ್ನು ಬದಲಾಯಿಸುವಂತಹ ಆಲೋಚನೆಗಳು, ಆವಿಷ್ಕಾರಗಳು ಮತ್ತು ಹೊಸತನಗಳನ್ನು ಸೃಷ್ಟಿಸುತ್ತಿದ್ದೇವೆ. ನಮ್ಮ ಈ ಆಲೋಚನೆಗಳು ಗಡಿಯಾಚೆಗೂ ತಲುಪಿವೆ ಎಂದು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ನಕ್ಸಲ್ ನಿಗ್ರಹ ಕಾರ್ಯಾಚರಣೆಯ ಬಗ್ಗೆ ಉಲ್ಲೇಖಿಸಿದ ಅವರು, ರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವೆಂದು ಘೋಷಿಸಿದ್ದೇವೆ. ಹಾಗೆಯೇ ನಾವೆಲ್ಲರೂ ನಮ್ಮ ಹೆಮ್ಮೆಯ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಾಗಿದೆ. ಈ ಹೋರಾಟದಲ್ಲಿ ಪ್ರತಿ ಪ್ರಜೆಯೂ ಯೋಧರಂತೆ ಕೆಲಸ ಮಾಡಬೇಕಾಗಿದೆ. ಸರ್ಕಾರವು ಈಗಾಗಲೇ ಈ ವಿಚಾರದಲ್ಲಿ ಸಕಲ ಆಯಾಮಗಳಲ್ಲಿ ಕೆಲಸ ಮಾಡುತ್ತಿದೆ ಎಂದರು

ashwinistudioputtur

ಜಾಹೀರಾತು

ಜಮ್ಮಿ ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಮಡಿದವರು, ಪಾಕ್ ವಿರುದ್ಧ ಹೋರಾಡಿ ಮಡಿದವರಿಗೂ ಸಿದ್ದರಾಮಯ್ಯ ಗೌರವ ಅರ್ಪಿಸಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕರ್ನಾಟಕವು ಈಗ ತಲಾದಾಯದ ವಿಚಾರದಲ್ಲಿ ಮೊದಲ ಸ್ಥಾನದಲ್ಲಿದೆ. ತಲಾದಾಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶೇ 101 ರಷ್ಟು ಪ್ರಗತಿಯನ್ನು ಸಾಧಿಸಿದ ರಾಜ್ಯ ನಮ್ಮ ಕರ್ನಾಟಕವಾಗಿದೆ. 2013-14 ರಲ್ಲಿ ಸ್ಥಿರ ದರಗಳಲ್ಲಿ 1,01,858 ರೂಪಾಯಿಗಳಷ್ಟಿದ್ದ ತಲಾದಾಯವು 2024-25 ರ ವೇಳೆಗೆ 2,04,605 ರೂಪಾಯಿಗಳಿಗೆ ತಲುಪಿದೆ ಎಂದರು.

ಬ್ರಿಟಿಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು ಧೈರ್ಯ, ತ್ಯಾಗ, ಸ್ವರಾಜ್ಯದ ಸಂಕೇತ ಮತ್ತು ಸಮಸ್ತ ಶಕ್ತಿಯಾದ ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು. ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ನಡೆದ ದೀರ್ಘಕಾಲದ ಹೋರಾಟದಲ್ಲಿ ಭಾಗವಹಿಸಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭ ಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರ ವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ. ಅವರಿಗೆ ನಮಿಸೋಣ. ಹಾಗೆಯೇ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿತ್ತು ಎಂಬುದು ಗಮನಾರ್ಹ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ, ಹಲಗಲಿಯ ವೀರ ಬೇಡರು, ಮೈಲಾರ ಮಹಾದೇವಪ್ಪ, ಬೂದಿ ಬಸಪ್ಪ ನಾಯಕ ಮುಂತಾದವರು ಹಾಗೂ ಶ್ರೀರಂಗಪಟ್ಟಣ, ಸುರಪುರ, ಕಿತ್ತೂರು, ಈಸೂರು, ವಿಧುರಾಶ್ವತ್ಥ, ಶಿವಪುರ, ಅಂಕೋಲ ಮುಂತಾದ ಸ್ಥಳಗಳು ಬ್ರಿಟೀಷರನ್ನು ನಡುಗಿಸಿದ್ದವು. ಲಕ್ಷಾಂತರ ಜನರು ಸಕ್ರಿಯವಾಗಿ ಭಾಗವಹಿಸಿದ್ದರಲ್ಲದೆ ಸಾವಿರಾರು ಜನರು ಜೀವ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ಗೌರವಿಸೋಣ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಾಮರಸ್ಯದಿಂದ ಕೂಡಿದ ಸಮೃದ್ಧ ಕರ್ನಾಟಕವನ್ನು ನಿರ್ಮಾಣ ಮಾಡುವುದರ ಮೂಲಕ ಸಶಕ್ತ ಭಾರತವನ್ನು ಕಟ್ಟೋಣ. ಸ್ವಾತಂತ್ರ್ಯ, ಸಂವಿಧಾನ ಹಾಗೂ ನೈಜ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವಕ್ಕಿಂತ ಮಿಗಿಲು ಎಂದು ಭಾವಿಸೋಣ. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ನ್ಯಾಯಗಳನ್ನು ನಿರಂತರವಾಗಿ ರಕ್ಷಿಸಿಕೊಳ್ಳುವ ಪ್ರತಿಜ್ಞೆ ಮಾಡಿ ಈ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣಗೊಳಿಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದರು.

Muliya

ಜಾಹೀರಾತು

SendShare4Share
Previous Post

ಒಳನುಸುಳುಕೋರರ ಕೈಗೆ ದೇಶವನ್ನು ಕೊಡುವುದಿಲ್ಲ, ‘ಸುದರ್ಶನ ಚಕ್ರ’ ಇದು ಭಾರತದ ಶತ್ರುಗಳಿಗೆ ಎಚ್ಚರಿಕೆ : ಪ್ರಧಾನಿ ನರೇಂದ್ರ ಮೋದಿ

Next Post

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In