ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ದಿನೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ಬಾಸ್ ಬಟ್ಲಡ್ಕ, ವಕೀಲರಾದ ಉದಯ್ ಕುಮಾರ್ ಬಿ.ಕೆ, ಯವರು ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್, ಕಂದಾಯ ಇಲಾಖೆ,ಗ್ರಂಥಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮರವರು ಕಾರ್ಯಕ್ರಮ ನಿರ್ವಹಿಸಿದರು, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ರವರು ವಂದನಾರ್ಪಣೆಗೈದರು.