ಶ್ರೀ ಕ್ಷೇತ್ರ ಧರ್ಮಸ್ಥಳ, ಅಣ್ಣಪ್ಪ ಸ್ವಾಮಿಯ ಬಗ್ಗೆ ಅಪಪ್ರಚಾರದಿಂದ ಅಸಂಖ್ಯಾತ ಭಕ್ತರಲ್ಲಿ ಗೊಂದಲದ ವಾತಾವರಣ ಮೂಡಿದೆ. ತನಿಖೆಯ ಭರದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕಾದ ಅಗತ್ಯ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ಎಸ್ ಐಟಿ ತನಿಖೆಯನ್ನು ಬಿಜೆಪಿ ಸ್ವಾಗತಿಸುತ್ತದೆ. ಆದರೆ ತನಿಖೆ ಪಾರದರ್ಶವಾಗಿ ನಡೆಯಬೇಕೆಂದು ಆಗ್ರಹಿಸುತ್ತದೆ. ಈ ಷಡ್ಯಂತ್ರದ ಬಗ್ಗೆ ಯಾವುದೇ ರೀತಿಯ ಮಾಹಿತಿ ಬಹಿರಂಗಪಡಿಸುತ್ತಿಲ್ಲ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆಯೂ ತನಿಖೆ ನಡೆಯಲಿ, ರಾಜ್ಯ ಸರಕಾರ ಅಪಪ್ರಚಾರಗಳಿಗೆ ಕಡಿವಾಣ ಹಾಕದೆ ಅಪಪ್ರಚಾರ ಎಸಗುತ್ತಿದೆ ಎಂದರು.
ಪ್ರಮುಖರಾದ ಛಲವಾದಿ ನಾರಾಯಣ ಸ್ವಾಮಿ,ಸಿ ಟಿ ರವಿ, ಕ್ಯಾ.ಬೃಜೇಶ್ ಚೌಟ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ , ಎಸ್.ಆರ್ ವಿಶ್ವನಾಥ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ,ಕಿರಣ್ ಕೊಡ್ಗಿ,ಪ್ರತಾಪ್ ಸಿಂಹ ನಾಯಕ್,ಉಮಾನಾಥ್ ಕೋಟ್ಯಾನ್, ರವಿಕುಮಾರ್, ಮೈಸೂರು ಎಂ.ಎಲ್.ಎ ಶ್ರೀ ವಾತ್ಸವ ಹಾಗೂ ಅಪಾರ ಸಂಖ್ಯೆಯಲ್ಲಿ ಪಕ್ಷದ ನಾಯಕರು ಉಪಸ್ಥಿತರಿದ್ದರು.