ಉಡುಪಿ: ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಇಂದು (ಆಗಸ್ಟ್ 21) ಬೆಳಗ್ಗೆ ವಶಕ್ಕೆ ಪಡೆದುಕೊಂಡಿದ್ದರು. ಹಾಗೂ ಸಂಜೆವೇಳೆಗೆ ಅವರನ್ನು ಬಂಧನ ಕೂಡ ಮಾಡಿದ್ದರು. ಬಂಧನದ ಬಳಿಕ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಿ ನಂತರ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ಬ್ರಹ್ಮಾವರ ತಾಲೂಕು ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಣೆ ಮಾಡಿ ಆದೇಶಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿಯ ವಿಚಾರಣೆ ನಡೆಸಿದ ಬ್ರಹ್ಮಾವರ ತಾಲೂಕು ನ್ಯಾಯಾಲಯ, ಜಾಮೀನು ಅರ್ಜಿ ತಿರಸ್ಕರಿಸಿದೆ. ಮಾತ್ರವಲ್ಲ, ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದೆ. ಸದ್ಯ, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಲವೇ ಕ್ಷಣಗಳಲ್ಲಿ ಅವರನ್ನು ಹಿರಿಯಡ್ಕ ಜೈಲ್‌ಗೆ ಶಿಫ್ಟ್ ಮಾಡಲಿದ್ದಾರೆ.