ಪುತ್ತೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾದ ಬೆಳ್ಳಾರೆ ಗ್ರಾಮ ಪಂಚಾಯಿತಿಯ 1ನೇ ವಾರ್ಡ್‌ನ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್‌ರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.
2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಘೋಷಣೆಯನ್ನು ನಿಗದಿತ ಸಮಯದೊಳಗೆ ಸಲ್ಲಿಸದ ಕಾರಣ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 43(ಬಿ)(4)ರ ಅಡಿಯಲ್ಲಿ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಇಕ್ಬಾಲ್‌ರ ಗ್ರಾಮ ಪಂಚಾಯಿತಿ ಸದಸ್ಯತ್ವವನ್ನು ಕಿತ್ತುಗೊಳ್ಳಲಾಗಿದೆ. ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ. ಮಹಮ್ಮದ್ ಇಕ್ಬಾಲ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.