ಮಂಗಳೂರು : ಆ.30.ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024- 25 ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಇಂದು ಮಂಗಳೂರು ನಲ್ಲಿ ನಡೆದ ದ ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಡಾ : ಎಂ. ಎನ್. ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ನೀಡಿ ಶಾಲು, ಹೂಹಾರ ಹಾಕಿ, ಸನ್ಮಾನಿಸಿದರು.
ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಜಿಲ್ಲೆಯ ಸಹಕಾರ ಇಲಾಖೆಯ ನಿಬಂಧಕ ರಾಗಿರುವ ರಮೇಶ್,ಹಾಗೂ ಲಾವಣ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ, ಕುಶಾ ಲಪ್ಪ ಗೌಡ ಬೆಳ್ತಂಗಡಿ, ಮನ್ಮಥ ಸುಳ್ಯ, ಸದಾಶಿವ ಉಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು