ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆ ಆಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜತೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಹಾಗೂ 3 ರಂದು ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಲವಡೆ ವ್ಯಾಪಕ ಮತ್ತು ಇನ್ನು ಕೆಲವೆಡೆ ಸಾಧಾರಣಯಾಗುವ ನಿರೀಕ್ಷೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.